ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಹುತಾತ್ಮ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗೌರವ ನಮನ ಸಲ್ಲಿಸಿದರು.
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಧೀಮಂತ ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಮಾರ್ಗದರ್ಶಕವಾಗಿರಲಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
“ದೇಶದ ಮಹಾನ್ ಸುಪುತ್ರ, ಖ್ಯಾತ ಚಿಂತಕ ಮತ್ತು ಶಿಕ್ಷಣ ತಜ್ಞರಾದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ದಿನದಂದು ಅವರಿಗೆ ಗೌರವಪೂರ್ವಕ ನಮನಗಳು. ಭಾರತ ಮಾತೆಯ ಸೇವೆಗೆ ಅವರು ತಮ್ಮ ಜೀವನವನ್ನು ಸಮರ್ಪಿಸಿದ್ದರು. ಎಲ್ಲ ಪೀಳಿಗೆಗಳಿಗೂ ಅವರ ಪ್ರಭಾವಶಾಲಿ ವ್ಯಕ್ತಿತ್ವ ಪ್ರೇರಣಾದಾಯಕವಾಗಿರಲಿದೆ.”
देश के महान सपूत, प्रख्यात विचारक और शिक्षाविद् डॉ. श्यामा प्रसाद मुखर्जी को उनके बलिदान दिवस पर सादर नमन। मां भारती की सेवा में उन्होंने अपना जीवन समर्पित कर दिया। उनका ओजस्वी व्यक्तित्व देश की हर पीढ़ी को प्रेरित करता रहेगा।
— Narendra Modi (@narendramodi) June 23, 2024