ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಪಂಡಿತ್ ದೀನದಯಾಳ್ ಉಪಾಧ್ಯಾಯರ ಅಂತ್ಯೋದಯ ಪರಿಕಲ್ಪನೆಯು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪ ಸಾಧನೆಗೆ ಅಮೂಲ್ಯವಾದ ಪಾತ್ರವನ್ನು ವಹಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.
ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ “ಮಹಾನ್ ರಾಷ್ಟ್ರೀಯವಾದಿ ಚಿಂತಕ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು. ಅವರ ಅಂತ್ಯೋದಯ ಪರಿಕಲ್ಪನೆಯು ಅಭಿವೃದ್ಧಿ ಹೊಂದಿದ ಭಾರತದ ದೂರದೃಷ್ಟಿಯನ್ನು ಸಾಧಿಸುವಲ್ಲಿ ಅಮೂಲ್ಯ ಪಾತ್ರವನ್ನು ವಹಿಸಲಿದೆ. ದೇಶಕ್ಕಾಗಿ ಅವರ ಬದ್ಧತೆ ಮತ್ತು ಸೇವೆ ಅವಿಸ್ಮರಣೀಯವಾಗಿದೆ’’ ಎಂದು ಹೇಳಿದ್ದಾರೆ.
महान राष्ट्रवादी विचारक पंडित दीनदयाल उपाध्याय जी को उनकी जयंती पर कोटि-कोटि नमन। अंत्योदय की उनकी अवधारणा विकसित भारत के संकल्प की सिद्धि में अमूल्य भूमिका निभाने वाली है। देश के लिए उनका समर्पण और सेवा भाव अविस्मरणीय रहेगा। pic.twitter.com/0tZ4oxcZ01
— Narendra Modi (@narendramodi) September 25, 2024