Naval Hospitals being opened for use of civilians in various cities
Navy is boosting oxygen availability in Lakshadweep and Andaman & Nicobar islands.
Navy transporting Oxygen Containers as well as other supplies from abroad to India
Medical personnel in the Navy have been redeployed at various locations in the country to manage Covid duties

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು, ನೌಕಾ ಸಿಬ್ಬಂದಿಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಅವರು ಇಂದು ಭೇಟಿ ಮಾಡಿದ್ದರು.

ಅವರು, ಸಾಂಕ್ರಾಮಿಕದ ಸಮಯದಲ್ಲಿ ದೇಶವಾಸಿಗಳಿಗೆ ನೆರವಾಗಲು ಭಾರತೀಯ ನೌಕಾಪಡೆಯು ಕೈಗೊಂಡರುವ ಹಲವು ಕ್ರಮಗಳ ಕುರಿತು ಪ್ರಧಾನಮಂತ್ರಿ ಅವರಿಗೆ ವಿವರಿಸಿದರು. ಭಾರತೀಯ ನೌಕಾಪಡೆಯು ಎಲ್ಲ ರಾಜ್ಯಗಳ ಆಡಳಿತವನ್ನು ತಲುಪಿದೆ ಮತ್ತು ಆಸ್ಪತ್ರೆ ಹಾಸಿಗೆಗಳು, ಸಾರಿಗೆ ಮತ್ತು ಇತರೆ ಅಗತ್ಯ ಸಾಮಗ್ರಿಗಳ ನೆರವನ್ನು ನೀಡಿದೆ ಎಂದು ಅವರು ಪ್ರಧಾನಮಂತ್ರಿಗೆ ತಿಳಿಸಿದರು. ಹಲವು ನಗರಗಳಲ್ಲಿ ನೌಕಾ ಆಸ್ಪತ್ರೆಗಳನ್ನು ನಾಗರಿಕರ ಬಳಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಅವರು ಪ್ರಧಾನಮಂತ್ರಿಗೆ ವಿವರಿಸಿದರು.

ನೌಕಾಪಡೆಯ ವೈದ್ಯಕೀಯ ಸಿಬ್ಬಂದಿಯನ್ನು ದೇಶದ ನಾನಾ ಸ್ಥಳಗಳಲ್ಲಿ ಕೋವಿಡ್ ನಿರ್ವಹಣೆ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ ಎಂದು ಅವರು ಪ್ರಧಾನಮಂತ್ರಿ ಅವರಿಗೆ ತಿಳಿಸಿದರು.  ನೌಕಾ ಸಿಬ್ಬಂದಿಯನ್ನು ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಲು ಅವರಿಗೆ ಯುದ್ದಭೂಮಿಗಳಲ್ಲಿನ ನರ್ಸಿಂಗ್ ಸಹಾಯಕ ತರಬೇತಿಯನ್ನು ನೀಡಲಾಗುತ್ತಿದೆ.

ಅಲ್ಲದೆ, ನೌಕಾ ಸಿಬ್ಬಂದಿಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಅವರು ಪ್ರಧಾನಮಂತ್ರಿ ಅವರಿಗೆ, ಲಕ್ಷದ್ವೀಪ ಮತ್ತು ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳಲ್ಲಿ ಆಕ್ಸಿಜನ್ ಲಭ್ಯತೆಯನ್ನು ಹೆಚ್ಚಿಸಲು ನೌಕಾಪಡೆಯ ನೆರವು ಕುರಿತು ವಿವರ ನೀಡಿದರು.

ಬಹರೈನ್, ಕತಾರ್, ಕುವೈತ್, ಸಿಂಗಾಪುರ ರಾಷ್ಟ್ರಗಳಿಂದ ಭಾರತಕ್ಕೆ ಆಕ್ಸಿಜನ್ ಕಂಟೈನರ್ ಮತ್ತು ಇತರೆ ಸಾಮಗ್ರಿಗಳ ಸಾಗಾಣೆಗೆ ಭಾರತೀಯ ನೌಕಾಪಡೆ ನೆರವು ನೀಡುತ್ತಿರುವುದ ಕುರಿತು ಪ್ರಧಾನಮಂತ್ರಿ ಅವರಿಗೆ ವಿವರಿಸಲಾಯಿತು.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
PM Modi hails diaspora in Kuwait, says India has potential to become skill capital of world

Media Coverage

PM Modi hails diaspora in Kuwait, says India has potential to become skill capital of world
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಡಿಸೆಂಬರ್ 2024
December 21, 2024

Inclusive Progress: Bridging Development, Infrastructure, and Opportunity under the leadership of PM Modi