ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕೇಂದ್ರ ಬಜೆಟ್ ನಂತರದ ವೆಬಿನಾರ್ ಅನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಉದ್ದೇಶಿಸಿ ಮಾತನಾಡಿದ ಬಜೆಟ್ ನಂತರದ ವೆಬಿನಾರ್ಗಳ ಸರಣಿಯಲ್ಲಿ ಇದು ಐದನೇ ವೆಬಿನಾರ್ ಆಗಿದೆ. ಕೇಂದ್ರ ಸಚಿವರು, ಸಾರ್ವಜನಿಕ ಮತ್ತು ಖಾಸಗಿ ವಲಯಗಳ ಆರೋಗ್ಯ ವೃತ್ತಿಪರರು ಮತ್ತು ಅರೆ ವೈದ್ಯಕೀಯ, ನರ್ಸಿಂಗ್, ಆರೋಗ್ಯ ನಿರ್ವಹಣೆ, ತಂತ್ರಜ್ಞಾನ ಮತ್ತು ಸಂಶೋಧನೆಯ ವೃತ್ತಿಪರರು ಈ ಸಂದರ್ಭದಲ್ಲಿ ಹಾಜರಿದ್ದರು.
ಭಾರತದ ಆರೋಗ್ಯ ವ್ಯವಸ್ಥೆಯ ದಕ್ಷತೆ ಮತ್ತು ಧ್ಯೇಯ ಆಧಾರಿತ ಸ್ವರೂಪವನ್ನು ನಿರೂಪಿಸಿದ ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನವನ್ನು ಯಶಸ್ವಿಯಾಗಿ ನಡೆಸುತ್ತಿರುವ ಆರೋಗ್ಯ ವಲಯವನ್ನು ಆರಂಭದಲ್ಲಿ ಪ್ರಧಾನಿ ಅಭಿನಂದಿಸಿದರು.
ಕಳೆದ 7 ವರ್ಷಗಳಲ್ಲಿ ಆರೋಗ್ಯ ಕ್ಷೇತ್ರದ ಸುಧಾರಣೆ ಮತ್ತು ಪರಿವರ್ತನೆಗೆ ಕೈಗೊಂಡಿರುವ ಕ್ರಮಗಳನ್ನು ಮುಂದುವರಿಸುವ ಪ್ರಯತ್ನವನ್ನು ಬಜೆಟ್ ಮಾಡಿದೆ ಎಂದು ಪ್ರಧಾನಿ ಹೇಳಿದರು. "ನಾವು ನಮ್ಮ ಆರೋಗ್ಯ ವ್ಯವಸ್ಥೆಯಲ್ಲಿ ಸಮಗ್ರವಾದ ಕಾರ್ಯವಿಧಾನವನ್ನು ಅಳವಡಿಸಿಕೊಂಡಿದ್ದೇವೆ. ಇಂದು ನಮ್ಮ ಗಮನ ಆರೋಗ್ಯದ ಮೇಲೆ ಮಾತ್ರವಲ್ಲ ಸೀಮಿತವಾಗದೆ, ಸ್ವಾಸ್ಥ್ಯದ ಮೇಲೂ ನೆಟ್ಟಿದೆ", ಎಂದು ಅವರು ಒತ್ತಿ ಹೇಳಿದರು.
ಆರೋಗ್ಯ ಕ್ಷೇತ್ರವನ್ನು ಸಮಗ್ರ ಮತ್ತು ಎಲ್ಲರನ್ನೂ ಒಳಗೊಂಡಿರುವ ವಲಯವನ್ನಾಗಿ ಬಿಂಬಿಸುವ ಮೂರು ಅಂಶಗಳ ಬಗ್ಗೆ ಪ್ರಧಾನಿ ವಿವರಿಸಿದರು. ಇವುಗಳಲ್ಲಿ ಮೊದಲನೆಯದು ಆಧುನಿಕ ವೈದ್ಯಕೀಯ ವಿಜ್ಞಾನ ಸಂಬಂಧಿತ ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲಗಳ ವಿಸ್ತರಣೆ. ಎರಡನೆಯದಾಗಿ, ಆಯುಷ್ ನಂತಹ ಸಾಂಪ್ರದಾಯಿಕ ಭಾರತೀಯ ವೈದ್ಯಕೀಯ ವ್ಯವಸ್ಥೆಗಳಲ್ಲಿ ಸಂಶೋಧನೆಯನ್ನು ಉತ್ತೇಜಿಸುವುದು ಮತ್ತು ಆರೋಗ್ಯ ವ್ಯವಸ್ಥೆಯಲ್ಲಿ ಅವುಗಳ ಸಕ್ರಿಯತೆ ಹೆಚ್ಚಿಸುವುದು. ಮೂರನೆಯದಾಗಿ, ಆಧುನಿಕ ಮತ್ತು ಭವಿಷ್ಯದ ತಂತ್ರಜ್ಞಾನದ ಮೂಲಕ ಪ್ರತಿಯೊಬ್ಬ ನಾಗರಿಕ ಮತ್ತು ದೇಶದ ಪ್ರತಿಯೊಂದು ಪ್ರದೇಶಕ್ಕೂ ಕೈಗೆಟುಕುವ ದರದಲ್ಲಿ ಆರೋಗ್ಯ ರಕ್ಷಣೆಯನ್ನು ಒದಗಿಸುವುದು. "ಬ್ಲಾಕ್ ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಹಾಗೂ ಹಳ್ಳಿಗಳಿಗೆ ಸಮೀಪವಾಗಿ ನಿರ್ಣಾಯಕ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಪ್ರಯತ್ನವಾಗಿದೆ. ಈ ಮೂಲಸೌಕರ್ಯವನ್ನು ಕಾಲಕಾಲಕ್ಕೆ ನಿರ್ವಹಿಸಬೇಕು ಮತ್ತು ನವೀಕರಿಸಬೇಕು. ಇದಕ್ಕಾಗಿ ಖಾಸಗಿ ವಲಯ ಮತ್ತು ಇತರ ವಲಯಗಳು ಸಹ ಹೆಚ್ಚಿನ ಉತ್ಸಾಹದೊಂದಿಗೆ ಮುಂದೆ ಬರಬೇಕಾಗುತ್ತದೆ", ಎಂದು ಅವರು ಹೇಳಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳ ಜಾಲವನ್ನು ಬಲಪಡಿಸುವ ಸಲುವಾಗಿ 1.5 ಲಕ್ಷ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸ್ಥಾಪನೆ ಕೆಲಸವೂ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ಪ್ರಧಾನಿ ಮಾಹಿತಿ ನೀಡಿದರು. ಇಲ್ಲಿಯವರೆಗೆ 85000 ಕ್ಕೂ ಹೆಚ್ಚು ಕೇಂದ್ರಗಳು ಸಾಮಾನ್ಯ ಆರೋಗ್ಯ ತಪಾಸಣೆ, ಲಸಿಕೆ ಮತ್ತು ಪರೀಕ್ಷೆಗಳ ಸೌಲಭ್ಯವನ್ನು ಒದಗಿಸುತ್ತಿವೆ. ಈ ಬಜೆಟ್ ನಲ್ಲಿ, ಮಾನಸಿಕ ಆರೋಗ್ಯ ರಕ್ಷಣೆಯ ಸೌಲಭ್ಯವನ್ನು ಸಹ ಈ ಕೇಂದ್ರಗಳಿಗೆ ಸೇರಿಸಲಾಗಿದೆ ಎಂದು ಅವರು ಹೇಳಿದರು.
ವೈದ್ಯಕೀಯ ಮಾನವ ಸಂಪನ್ಮೂಲವನ್ನು ಹೆಚ್ಚಿಸುವ ಕುರಿತು ಮಾತನಾಡಿದ ಪ್ರಧಾನಮಂತ್ರಿಯವರು, "ಆರೋಗ್ಯ ಸೇವೆಗಳ ಬೇಡಿಕೆ ಹೆಚ್ಚುತ್ತಿರುವುದರಿಂದ, ಅದಕ್ಕೆ ಅನುಗುಣವಾಗಿ ನುರಿತ ಆರೋಗ್ಯ ವೃತ್ತಿಪರರನ್ನು ಸೃಷ್ಟಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ಆದ್ದರಿಂದ, ಕಳೆದ ವರ್ಷಕ್ಕೆ ಹೋಲಿಸಿದರೆ ಆರೋಗ್ಯ ಶಿಕ್ಷಣ ಮತ್ತು ಆರೋಗ್ಯ ಆರೈಕೆಗೆ ಸಂಬಂಧಿಸಿದ ಮಾನವ ಸಂಪನ್ಮೂಲ ಅಭಿವೃದ್ಧಿಗಾಗಿ ಬಜೆಟ್ನಲ್ಲಿ ಗಮನಾರ್ಹ ಹೆಚ್ಚಳ ಮಾಡಲಾಗಿದೆ," ಎಂದರು. ತಂತ್ರಜ್ಞಾನದ ಸಹಾಯದಿಂದ ಈ ಸುಧಾರಣೆಗಳನ್ನು ಮುಂದಕ್ಕೆ ಕೊಂಡೊಯ್ಯುವ ಕಾರ್ಯದಲ್ಲಿ ನಿಗದಿತ ಕಾಲಮಿತಿಯೊಂದಿಗೆ ಕೆಲಸ ಮಾಡುವಂತೆ ಆರೋಗ್ಯ ಸಮುದಾಯಕ್ಕೆ ಪ್ರಧಾನಿ ಕರೆ ನೀಡಿದರು. ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ, ಅದರ ವ್ಯಾಪ್ತಿ ಹೆಚ್ಷಿಸುವ ಹಾಗೂ ಎಲ್ಲರಿಗೂ ಕೈಗೆಟುಕುವಂತೆ ಮಾಡುವತ್ತ ಗಮನ ಹರಿಸುವ ಮೂಲಕ ಈ ಕೆಲಸದಲ್ಲಿ ತೊಡಗುವಂತೆ ಕೋರಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಆಧುನಿಕ ಮತ್ತು ಭವಿಷ್ಯದ ತಂತ್ರಜ್ಞಾನಗಳ ಅಂಶದ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಮಂತ್ರಿಯವರು, ಡಿಜಿಟಲ್ ಆರೋಗ್ಯ ಪರಿಹಾರಗಳಿಗೆ ಸಂಬಂಧಿಸಿದಂತೆ ವಿಶ್ವದಲ್ಲಿ ಭಾರತದ ಖ್ಯಾತಿಯನ್ನು ಸಾರಿದ ʻಕೋವಿನ್ʼನಂತಹ ವೇದಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಗಪಡಿಸಿದರು. ಅದೇ ರೀತಿ, ʻಆಯುಷ್ಮಾನ್ ಭಾರತ್ ಡಿಜಿಟಲ್ ಆರೋಗ್ಯ ಯೋಜನೆʼಯು ಗ್ರಾಹಕ ಮತ್ತು ಆರೋಗ್ಯ ಆರೈಕೆ ಪೂರೈಕೆದಾರರ ನಡುವೆ ಸುಲಭ ಸಮನ್ವಯವನ್ನು ಒದಗಿಸುತ್ತದೆ ಎಂದು ಅವರು ಹೇಳಿದರು. "ಇದರೊಂದಿಗೆ, ದೇಶದಲ್ಲಿ ಚಿಕಿತ್ಸೆ ಪಡೆಯುವುದು ಮತ್ತು ನೀಡುವುದು ಎರಡೂ ತುಂಬಾ ಸುಲಭವಾಗುತ್ತವೆ. ಅಷ್ಟೇ ಅಲ್ಲದೆ, ಇದು ಜಾಗತಿಕ ಮಟ್ಟದಲ್ಲಿ ಭಾರತದ ಗುಣಮಟ್ಟದ ಮತ್ತು ಕೈಗೆಟುಕುವ ದರದ ಆರೋಗ್ಯ ವ್ಯವಸ್ಥೆಯ ಲಭ್ಯತೆಯನ್ನು ಸುಗಮಗೊಳಿಸುತ್ತದೆ", ಎಂದು ಹೇಳಿದ ಪ್ರಧಾನಿ ಅವರು ʻಆಯುಷ್ಮಾನ್ ಭಾರತ್ ಡಿಜಿಟಲ್ ಆರೋಗ್ಯ ಅಭಿಯಾನʼದ ಪ್ರಯೋಜನಗಳ ವಿವರಿಸಿದರು.
ಸಾಂಕ್ರಾಮಿಕ ರೋಗದ ಸಮಯದಲ್ಲಿ ದೂರದ ಆರೋಗ್ಯ ರಕ್ಷಣೆ ಮತ್ತು ಟೆಲಿ ಮೆಡಿಸಿನ್ ನ ಸಕಾರಾತ್ಮಕ ಪಾತ್ರದ ಬಗ್ಗೆ ಪ್ರಧಾನಿಯವರು ವಿವರಿಸಿದರು. ನಗರ ಮತ್ತು ಗ್ರಾಮೀಣ ಭಾರತದ ನಡುವಿನ ಆರೋಗ್ಯ ಸೌಲಭ್ಯ ಲಭ್ಯತೆ ಅಂತರವನ್ನು ಕಡಿಮೆ ಮಾಡುವಲ್ಲಿ ಈ ತಂತ್ರಜ್ಞಾನಗಳ ಪಾತ್ರವನ್ನು ಅವರು ಒತ್ತಿ ಹೇಳಿದರು. ಮುಂಬರುವ 5ಜಿ ನೆಟ್ವರ್ಕ್ ಮತ್ತು ಆಪ್ಟಿಕಲ್ ಫೈಬರ್ ನೆಟ್ವರ್ಕ್ ಯೋಜನೆಯನ್ನು ಪ್ರತಿ ಹಳ್ಳಿಗೂ ತಲುಪಿಸಲಾಗುವುದು ಎಂದು ಪ್ರಸ್ತಾಪಿಸಿದ ಪ್ರಧಾನಮಂತ್ರಿಯವರು, ತಮ್ಮ ಪಾಲುದಾರಿಕೆಯನ್ನು ಹೆಚ್ಚಿಸಲು ಖಾಸಗಿ ವಲಯಗಳು ಮುಂದೆ ಬರಬೇಕೆಂದು ಸೂಚಿಸಿದರು. ವೈದ್ಯಕೀಯ ಉದ್ದೇಶಗಳಿಗಾಗಿ ಡ್ರೋನ್ ತಂತ್ರಜ್ಞಾನವನ್ನು ಉತ್ತೇಜಿಸಲು ಅವರು ಒತ್ತಿ ಹೇಳಿದರು.
ʻಆಯುಷ್ʼ ವೈದ್ಯಕೀಯ ಪದ್ಧತಿಯ ಜಾಗತಿಕ ಸ್ವೀಕಾರ ಹೆಚ್ಚುತ್ತಿರುವ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ವಿಶ್ವ ಆರೋಗ್ಯ ಸಂಸ್ಥೆಯು (ಡಬ್ಲ್ಯೂಹೆಚ್ಒ) ತನ್ನ ಏಕೈಕ ʻಜಾಗತಿಕ ಸಾಂಪ್ರದಾಯಿಕ ಔಷಧ ಕೇಂದ್ರʼವನ್ನು ಭಾರತದಲ್ಲಿ ಪ್ರಾರಂಭಿಸಲಿದೆ ಎಂಬ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. "ನಮಗಾಗಿ ಮತ್ತು ವಿಶ್ವಕ್ಕಾಗಿ ʻಆಯುಷ್ʼನ ಉತ್ತಮ ಪರಿಹಾರಗಳನ್ನು ಹೇಗೆ ಸೃಷ್ಟಿಸಬೇಕೆಂಬ ಜವಾಬ್ದಾರಿ ಈಗ ನಮ್ಮೆಲ್ಲರ ಮೇಲಿದೆ,ʼʼ ಎಂದು ಅವರು ಹೇಳಿದರು.
ये बजट बीते 7 साल से हेल्थकेयर सिस्टम को रिफॉर्म और ट्रांसफॉर्म करने के हमारे प्रयासों को विस्तार देता है।
— PMO India (@PMOIndia) February 26, 2022
हमने अपने हेल्थकेयर सिस्टम में एक holistic approach को adopt किया है।
आज हमारा फोकस health पर तो है ही, wellness पर भी उतना ही अधिक है: PM @narendramodi
दूसरा- आयुष जैसी पारंपरिक भारतीय चिकित्सा पद्धति में research को प्रोत्साहन और हेल्थकेयर सिस्टम में उसका active engagement.
— PMO India (@PMOIndia) February 26, 2022
और तीसरा – Modern और Futuristic technology के माध्यम से देश के हर व्यक्ति, हर हिस्से तक बेहतर और affordable healthcare सुविधाएं पहुंचाना: PM @narendramodi
जब हम हेल्थ सेक्टर में holistic और inclusiveness की बात करते हैं तो, इसमें तीन फैक्टर्स का समावेश कर रहे हैं।
— PMO India (@PMOIndia) February 26, 2022
पहला- modern medical science से जुड़े इंफ्रास्ट्रक्चर और ह्यूमेन रिसोर्स का विस्तार: PM @narendramodi
हमारा प्रयास है कि क्रिटिकल हेल्थकेयर सुविधाएं ब्लॉक स्तर पर हों, जिला स्तर पर हों, गांवों के नज़दीक हों।
— PMO India (@PMOIndia) February 26, 2022
इस इंफ्रास्ट्रक्चर को मैंटेन करना और समय-समय पर अपग्रेड करना जरूरी है।
इसके लिए प्राइवेट सेक्टर और दूसरे सेक्टर्स को भी ज्यादा ऊर्जा के साथ आगे आना होगा: PM @narendramodi
प्राइमरी हेल्थकेयर नेटवर्क को सशक्त करने के लिए डेढ़ लाख हेल्थ एंड वेलनेस सेंटर्स के निर्माण का काम भी तेज़ी से चल रहा है।
— PMO India (@PMOIndia) February 26, 2022
अभी तक 85000 से अधिक सेंटर्स रुटीन चेकअप, वैक्सीनेशन और टेस्ट्स की सुविधा दे रहे हैं।
इस बार के बजट में इनमें मेन्टल हेल्थकेयर की सुविधा भी जोड़ी गई है: PM
जैसे-जैसे हेल्थ सर्विस की डिमांड बढ़ रही है, उसके अनुसार ही हम स्किल्ड हेल्थ प्रोफेशनल्स तैयार करने का भी प्रयास कर रहे हैं।
— PMO India (@PMOIndia) February 26, 2022
इसलिए बजट में हेल्थ एजुकेशन और हेल्थकेयर से जुड़े ह्युमेन रिसोर्स डेवलपमेंट के लिए पिछले साल की तुलना में बड़ी वृद्धि की गई है: PM @narendramodi
कोरोना वैक्सीनेशन में CoWIN जैसे प्लेटफॉर्म के माध्यम से हमारी डिजिटल टेक्नॉलॉजी का लोहा पूरी दुनिया ने माना है: PM @narendramodi
— PMO India (@PMOIndia) February 26, 2022
आयुष्मान भारत डिजिटल मिशन, कंज्यूमर और हेल्थकेयर प्रोवाइडर के बीच एक आसान इंटरफेस उपलब्ध कराता है।
— PMO India (@PMOIndia) February 26, 2022
इससे देश में उपचार पाना और देना , दोनों बहुत आसान हो जाएंगे।
इतना ही नहीं, ये भारत के क्वालिटी और अफॉर्डेबल हेल्थकेयर सिस्टम की ग्लोबल एक्सेस भी आसान बनाएगा: PM @narendramodi
आयुष की भूमिका तो आज पूरी दुनिया भी मान रही है।
— PMO India (@PMOIndia) February 26, 2022
हमारे लिए गर्व की बात है कि WHO भारत में अपना विश्व में अकेला Global Centre of Traditional Medicine शुरू करने जा रहा है: PM @narendramodi