ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನಿನ ಅಧ್ಯಕ್ಷರಾದ ಡಾ ಸೆಯ್ಯದ್ ಇಬ್ರಾಹಿಂ ರೈಸಿ ಅವರನ್ನು 24 ಆಗಸ್ಟ್ 2023 ರಂದು ಜೋಹಾನ್ಸ್ಬರ್ಗ್ನಲ್ಲಿ 15 ನೇ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಭೇಟಿ ಮಾಡಿದರು.
ವ್ಯಾಪಾರ ಮತ್ತು ಹೂಡಿಕೆ, ಸಂಪರ್ಕ, ಇಂಧನ ಮತ್ತು ಭಯೋತ್ಪಾದನೆ ನಿಗ್ರಹ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಮಾರ್ಗಗಳ ಕುರಿತು ಉಭಯ ನಾಯಕರು ಚರ್ಚಿಸಿದರು. ಚಬಹಾರ್ ಯೋಜನೆ ಸೇರಿದಂತೆ ಮೂಲಸೌಕರ್ಯ ಸಹಕಾರ ಕಾರ್ಯವನ್ನು ತ್ವರಿತ ಗತಿಯಲ್ಲಿ ಮಾಡಲು ಇಬ್ಬರೂ ಒಪ್ಪಿಕೊಂಡರು. ಅಫ್ಘಾನಿಸ್ತಾನ ಸೇರಿದಂತೆ ಪ್ರಾದೇಶಿಕ ಬೆಳವಣಿಗೆಗಳ ಕುರಿತು ನಾಯಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಬ್ರಿಕ್ಸ್ ಕುಟುಂಬಕ್ಕೆ ಸೇರ್ಪಡೆಗೊಂಡಿದ್ದಕ್ಕಾಗಿ ಅಧ್ಯಕ್ಷ ರೈಸಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.
ಅಧ್ಯಕ್ಷ ರೈಸಿ ಅವರು ಚಂದ್ರಯಾನ ಮಿಷನ್ನ ಯಶಸ್ಸಿಗೆ ಪ್ರಧಾನಮಂತ್ರಿಯವರನ್ನು ಅಭಿನಂದಿಸಿದರು ಮತ್ತು ಇರಾನ್ನ ಬ್ರಿಕ್ಸ್ ಸದಸ್ಯತ್ವಕ್ಕಾಗಿ ಭಾರತದ ಬೆಂಬಲಕ್ಕಾಗಿ ಪ್ರಧಾನ ಮಂತ್ರಿಯವರಿಗೆ ಧನ್ಯವಾದಗಳನ್ನು ಅರ್ಪಿಸಿದರು̤
Had a wonderful meeting with President Ebrahim Raisi. I am glad that Iran will be joining BRICS. Discussed ways to deepen trade and cultural cooperation between India and Iran. @raisi_com pic.twitter.com/rIFdFFgfdW
— Narendra Modi (@narendramodi) August 24, 2023