ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 15ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ 2023ರ ಆಗಸ್ಟ್ 24ರಂದು ಜೋಹಾನ್ಸ್ ಬರ್ಗ್ ನಲ್ಲಿ ಸೆನೆಗಲ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಮ್ಯಾಕಿ ಸಾಲ್ ಅವರನ್ನು ಭೇಟಿ ಮಾಡಿದರು.
ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಇಂಧನ, ಗಣಿಗಾರಿಕೆ, ಕೃಷಿ, ಔಷಧೀಯ, ರೈಲ್ವೆ, ಸಾಮರ್ಥ್ಯ ವರ್ಧನೆ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ದ್ವಿಪಕ್ಷೀಯ ಪಾಲುದಾರಿಕೆಯನ್ನು ಆಳಗೊಳಿಸುವ ಮಾರ್ಗಗಳ ಬಗ್ಗೆ ಉಭಯ ನಾಯಕರು ಫಲಪ್ರದ ಚರ್ಚೆ ನಡೆಸಿದರು.
ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯಲ್ಲಿ ಭಾಗವಹಿಸಿದ್ದಕ್ಕಾಗಿ ಮತ್ತು ಕಳೆದ ವರ್ಷ ಆಫ್ರಿಕಾ ಒಕ್ಕೂಟಕ್ಕೆ ಅವರ ಬಲವಾದ ನಾಯಕತ್ವಕ್ಕಾಗಿ ಅಧ್ಯಕ್ಷ ಸಾಲ್ ಅವರನ್ನು ಪ್ರಧಾನಿ ಶ್ಲಾಘಿಸಿದರು.
ಚಂದ್ರಯಾನ ಮಿಷನ್ ನ ಯಶಸ್ಸಿಗಾಗಿ ಅಧ್ಯಕ್ಷ ಸಾಲ್ ಅವರು ಪ್ರಧಾನಮಂತ್ರಿ ಅವರನ್ನು ಅಭಿನಂದಿಸಿದರು ಮತ್ತು ಜಿ 20 ಯಲ್ಲಿ ಆಫ್ರಿಕನ್ ಒಕ್ಕೂಟದ ಖಾಯಂ ಸದಸ್ಯತ್ವಕ್ಕಾಗಿ ಭಾರತದ ಪ್ರಯತ್ನಗಳಿಗೆ ಕೃತಜ್ಞತೆ ಸಲ್ಲಿಸಿದರು. ಅಭಿವೃದ್ಧಿಶೀಲ ರಾಷ್ಟ್ರಗಳ ಆದ್ಯತೆಗಳನ್ನು ಪ್ರತಿಪಾದಿಸುವಲ್ಲಿ ಪ್ರಧಾನಮಂತ್ರಿ ಅವರು ನಾಯಕತ್ವವನ್ನು ಅವರು ಶ್ಲಾಘಿಸಿದರು ಮತ್ತು ಭಾರತದ ಅಧ್ಯಕ್ಷತೆಯಲ್ಲಿ ಮುಂಬರುವ ಜಿ 20 ಶೃಂಗಸಭೆಯ ಯಶಸ್ಸಿಗೆ ಶುಭ ಹಾರೈಸಿದರು
Held talks with President @Macky_Sall in Johannesburg. India considers Senegal to be a valued developmental partner. We discussed sectors like energy, infrastructure, defence and more in our meeting. pic.twitter.com/keoZjjnjZg
— Narendra Modi (@narendramodi) August 24, 2023