ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಗೌರವಾನ್ವಿತ ಪ್ರಧಾನಿ ಶ್ರೀ ಆಂಥೋನಿ ಅಲ್ಬನೀಸ್ ಅವರು ಅಮೆರಿಕದ ವಿಲ್ಮಿಂಗ್ಟನ್‌ನಲ್ಲಿ 6 ನೇ ಕ್ವಾಡ್ ನಾಯಕರ ಶೃಂಗಸಭೆಯ ಹಿನ್ನೆಲೆಯಲ್ಲಿ ಭೇಟಿಯಾದರು. 2022 ರ ಮೇ ನಂತರ ಇವರು ಒಂಬತ್ತನೇ ಬಾರಿಗೆ ವೈಯಕ್ತಿಕವಾಗಿ ಸಂವಹನ ನಡೆಸಿದ್ದಾರೆ.
ರಾಜಕೀಯ ಮತ್ತು ಕಾರ್ಯತಂತ್ರ, ರಕ್ಷಣೆ ಮತ್ತು ಭದ್ರತೆ, ವ್ಯಾಪಾರ ಮತ್ತು ಹೂಡಿಕೆಗಳು, ಶಿಕ್ಷಣ ಮತ್ತು ಸಂಶೋಧನೆ, ಹವಾಮಾನ ಬದಲಾವಣೆ ಮತ್ತು ನವೀಕರಿಸಬಹುದಾದ ಇಂಧನ, ಜನರ ನಡುವಿನ ಸಂಬಂಧಗಳಂತಹ ವ್ಯಾಪಕ ಶ್ರೇಣಿಯ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಕುರಿತು ಉಭಯ ನಾಯಕರು ಪರಸ್ಪರ ಚರ್ಚಿಸಿದರು. ಪ್ರಧಾನಮಂತ್ರಿಯವರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಉನ್ನತ ಮಟ್ಟದ ಸಂಪರ್ಕ ಮೂಲಕ ದ್ವಿಪಕ್ಷೀಯ ಸಂಬಂಧಗಳಿಗೆ ಬಲವಾದ ಆವೇಗ ನೀಡಿರುವ ಬಗ್ಗೆ ತಮ್ಮ ಸಹಮತ ವ್ಯಕ್ತಪಡಿಸಿದರು.
ಇಬ್ಬರೂ ನಾಯಕರು ಬಹುಪಕ್ಷೀಯ ವೇದಿಕೆಗಳಲ್ಲಿ ಸಹಕಾರವನ್ನು ಬಲಪಡಿಸುವ ತಮ್ಮ ಬದ್ಧತೆಯನ್ನು ಅನಾವರಣಗೊಳಿಸಿದರು ಮತ್ತು ಭಾರತ-ಆಸ್ಟ್ರೇಲಿಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಔನತ್ಯಕ್ಕೆ ಕೊಂಡೊಯ್ಯುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.
Held extensive discussions with PM Albanese. We seek to add even more momentum in areas like trade, security, space and culture. India greatly cherishes the time tested friendship with Australia. @AlboMP pic.twitter.com/Bo4kzd8QwY
— Narendra Modi (@narendramodi) September 22, 2024