ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸೌದಿ ಅರೇಬಿಯಾದ ಪ್ರಧಾನ ಮಂತ್ರಿ ಮತ್ತು ಘನತೆವೆತ್ತ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದರು.
ಈ ಇಬ್ಬರೂ ನಾಯಕರು ದ್ವಿಪಕ್ಷೀಯ ಸಹಕಾರದ ಹಲವಾರು ವಿಷಯಗಳನ್ನು ಪರಿಶೀಲಿಸಿ, ಪರಸ್ಪರ ಹಿತಾಸಕ್ತಿಯ ವಿವಿಧ ಬಹುಪಕ್ಷೀಯ ಮತ್ತು ಜಾಗತಿಕ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಏಪ್ರಿಲ್ 2023ರಲ್ಲಿ ಸುಡಾನ್ ನಿಂದ ಜೆಡ್ಡಾ ಮೂಲಕ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಸೌದಿ ಅರೇಬಿಯಾ ನೀಡಿದ ಅತ್ಯುತ್ತಮ ಬೆಂಬಲಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರಿಗೆ ಧನ್ಯವಾದ ಅರ್ಪಿಸಿದರು. ಮುಂಬರುವ ಹಜ್ ಯಾತ್ರೆಗೂ ಕೂಡ ಅವರು ಶುಭ ಕೋರಿದರು.
ಜಿ-20 ಪ್ರೆಸಿಡೆನ್ಸಿಯ ಭಾಗವಾಗಿ ಭಾರತದ ಉಪಕ್ರಮಗಳಿಗೆ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರು ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು. ಭಾರತಕ್ಕೆ ಭೇಟಿನೀಡಲು ಎದುರು ನೋಡುತ್ತಿರುವುದಾಗಿ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ತಿಳಿಸಿದರು.
ಇಬ್ಬರೂ ನಾಯಕರು ಪರಸ್ಪರ ಸಂಪರ್ಕದಲ್ಲಿರಲು ಸಮ್ಮತಿಸಿದರು.