ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ಪೇನ್ ಪ್ರಧಾನಿ ಘನತೆವೆತ್ತ ಶ್ರೀ ಪೆಡ್ರೊ ಸ್ಯಾಂಚೆಜ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.
ಉಭಯ ನಾಯಕರು ಪರಸ್ಪರ ಹಿತಾಸಕ್ತಿಯ ಹಲವಾರು ದ್ವಿಪಕ್ಷೀಯ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆ ಚರ್ಚಿಸಿದರು. ಅವರು ನಡೆಯುತ್ತಿರುವ ದ್ವಿಪಕ್ಷೀಯ ಉಪಕ್ರಮಗಳನ್ನು ಪರಿಶೀಲಿಸಿದರು ಮತ್ತು ಇತ್ತೀಚಿನ ಉನ್ನತ ಮಟ್ಟದ ವಿನಿಮಯ ಮತ್ತು ರಕ್ಷಣಾ, ಆರ್ಥಿಕ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಸಹಕಾರದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಡಿಜಿಟಲ್ ಮೂಲಸೌಕರ್ಯ, ಹವಾಮಾನ ಕ್ರಮ, ಶುದ್ಧ ಇಂಧನ ಪರಿವರ್ತನೆ ಮತ್ತು ಸುಸ್ಥಿರ ಅಭಿವೃದ್ಧಿಯಂತಹ ವಿಷಯಗಳಲ್ಲಿ ಸಹಕರಿಸಲು ಅವರು ಒಪ್ಪಿಕೊಂಡರು.
ವಸುದೈವ ಕುಟುಂಬಕಂ (ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ) ವಿಷಯದ ಆಧಾರದ ಮೇಲೆ ಏಕತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವ ನಿಟ್ಟಿನಲ್ಲಿ ಜಿ 20 ಅಧ್ಯಕ್ಷ ಸ್ಥಾನಕ್ಕಾಗಿ ಭಾರತದ ಆದ್ಯತೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪೇನ್ ಪ್ರಧಾನಿ ಅವರಿಗೆ ವಿವರಿಸಿದರು. ಜಿ 20 ಅಧ್ಯಕ್ಷತೆಯ ಅಡಿಯಲ್ಲಿ ಭಾರತದ ಉಪಕ್ರಮಗಳಿಗೆ ಪ್ರಧಾನಿ ಸ್ಯಾಂಚೆಜ್ ಸಂಪೂರ್ಣ ಬೆಂಬಲ ನೀಡಿದರು.
ಹಾಗೆಯೇ ಇಬ್ಬರೂ ನಾಯಕರು ಸಂಪರ್ಕದಲ್ಲಿರಲು ಸಮ್ಮತಿಸಿದರು.