ಇಸ್ರೇಲ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿದರು.
ಇಸ್ರೇಲ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಪರಿಣಾಮವಾಗಿ ಸಾವನ್ನಪ್ಪಿದ ಮತ್ತು ಗಾಯಗೊಂಡವರಿಗೆ ಆಳವಾದ ಸಂತಾಪ ಮತ್ತು ಸಹಾನುಭೂತಿ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಈ ಕಷ್ಟದ ಸಮಯದಲ್ಲಿ ಇಸ್ರೇಲ್ ನೊಂದಿಗೆ ಒಗ್ಗಟ್ಟಿನಿಂದ ಭಾರತದ ಜನರು ನಿಂತಿದ್ದಾರೆ ಎಂದು ತಿಳಿಸಿದರು.
ಭಯೋತ್ಪಾದನೆಯನ್ನು ಅದರ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಭಾರತವು ಬಲವಾಗಿ ಮತ್ತು ನಿಸ್ಸಂದಿಗ್ಧವಾಗಿ ಖಂಡಿಸುತ್ತದೆ ಎಂದು ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಪುನರುಚ್ಚರಿಸಿದರು.
ಇಸ್ರೇಲ್ನಲ್ಲಿರುವ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯ ವಿಷಯವನ್ನು ಪ್ರಧಾನಮಂತ್ರಿಯವರು ಚರ್ಚಿಸಿದರು. ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರು ಭಾರತೀಯರ ಸುರಕ್ಷತೆ ಮತ್ತ ುರಕ್ಷಣೆ ನಿಟ್ಟಿನಲ್ಲಿ ಸಂಪೂರ್ಣ ಸಹಕಾರ ಮತ್ತು ಬೆಂಬಲದ ಭರವಸೆ ನೀಡಿದರು.
ಉಭಯ ನಾಯಕರು ನಿಕಟ ಸಂಪರ್ಕದಲ್ಲಿರಲು ಒಪ್ಪಿಕೊಂಡರು.