Quoteಭಾರತ-ಯುಎಸ್ ಪಾಲುದಾರಿಕೆಗೆ ಅಧ್ಯಕ್ಷ ಬೈಡನ್ ಅವರ ಬದ್ಧತೆಗೆ ಪ್ರಧಾನಿ ಶ್ಲಾಘನೆ
Quoteಭಾರತ-ಯುಎಸ್ ಸಹಭಾಗಿತ್ವವು ಉಭಯ ದೇಶಗಳ ಜನರಿಗೆ ಮತ್ತು ಇಡೀ ಮಾನವೀಯತೆಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ ಎಂದು ನಾಯಕರು ಒತ್ತಿ ಹೇಳಿದರು
Quoteಅವರು ಉಕ್ರೇನ್ ಪರಿಸ್ಥಿತಿ ಸೇರಿದಂತೆ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳನ್ನು ಚರ್ಚಿಸಿದರು
Quoteಇತ್ತೀಚಿನ ಉಕ್ರೇನ್ ಭೇಟಿಯ ಬಗ್ಗೆ ಅಧ್ಯಕ್ಷ ಬೈಡನ್ ಅವರಿಗೆ ಪ್ರಧಾನಿ ವಿವರಿಸಿದರು
Quoteಶಾಂತಿ ಮತ್ತು ಸ್ಥಿರತೆಯ ಶೀಘ್ರ ಮರಳುವಿಕೆಗೆ ಭಾರತದ ಸಂಪೂರ್ಣ ಬೆಂಬಲವನ್ನು ಪ್ರಧಾನಿ ಪುನರುಚ್ಚರಿಸಿದರು
Quoteಉಭಯ ನಾಯಕರು ಬಾಂಗ್ಲಾದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಮತ್ತು ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಒತ್ತು ನೀಡಿದರು
Quoteಕ್ವಾಡ್ ಸೇರಿದಂತೆ ಬಹುಪಕ್ಷೀಯ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ಅವರು ಪುನರುಚ್ಚರಿಸಿದರು

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಸೆಫ್ ಆರ್. ಬೈಡನ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.

ಪ್ರಜಾಪ್ರಭುತ್ವ, ಕಾನೂನಿನ ನಿಯಮ ಮತ್ತು ಜನರ ನಡುವಿನ ಬಲವಾದ ಸಂಬಂಧಗಳ ಹಂಚಿಕೆಯ ಮೌಲ್ಯಗಳನ್ನು ಆಧರಿಸಿದ ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವಕ್ಕೆ  ಅಧ್ಯಕ್ಷ ಬೈಡನ್ ಅವರ ಆಳವಾದ ಬದ್ಧತೆಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದರು.

ದ್ವಿಪಕ್ಷೀಯ ಸಂಬಂಧಗಳಲ್ಲಿನ ಗಮನಾರ್ಹ ಪ್ರಗತಿಯನ್ನು ನಾಯಕರು ಪರಿಶೀಲಿಸಿದರು ಮತ್ತು ಭಾರತ-ಯುಎಸ್ ಸಹಭಾಗಿತ್ವವು ಎರಡೂ ದೇಶಗಳ ಜನರಿಗೆ ಮತ್ತು ಇಡೀ ಮಾನವೀಯತೆಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ ಎಂದು ಒತ್ತಿ ಹೇಳಿದರು.

ಇಬ್ಬರೂ ನಾಯಕರು ಹಲವಾರು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ವಿವರವಾದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ಉಕ್ರೇನ್ ಪರಿಸ್ಥಿತಿಯ ಬಗ್ಗೆ ಚರ್ಚಿಸುವಾಗ, ಪಿಎಂ ಮೋದಿ ಅವರು ಅಧ್ಯಕ್ಷ ಬೈಡನ್ ಅವರಿಗೆ ತಮ್ಮ  ಇತ್ತೀಚಿನ ಉಕ್ರೇನ್ ಭೇಟಿಯ ಬಗ್ಗೆ ವಿವರಿಸಿದರು. ಮಾತುಕತೆ ಮತ್ತು ರಾಜತಾಂತ್ರಿಕತೆಯ ಪರವಾಗಿ ಭಾರತದ ಸ್ಥಿರ ನಿಲುವನ್ನು ಅವರು ಪುನರುಚ್ಚರಿಸಿದರು ಮತ್ತು ಶಾಂತಿ ಹಾಗು  ಸ್ಥಿರತೆ ಶೀಘ್ರವಾಗಿ ಮರಳಲು ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು.

ಇಬ್ಬರೂ ನಾಯಕರು ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದರು. ಬಾಂಗ್ಲಾದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಮತ್ತು ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅವರು ಒತ್ತು ನೀಡಿದರು.

ಕ್ವಾಡ್ ಸೇರಿದಂತೆ ಬಹುಪಕ್ಷೀಯ ವೇದಿಕೆಗಳಲ್ಲಿನ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ಉಭಯ ನಾಯಕರು ಪುನರುಚ್ಚರಿಸಿದರು.

ಅವರು ಸಂಪರ್ಕದಲ್ಲಿರಲು ಒಪ್ಪಿಕೊಂಡರು.

 

  • Rampal Baisoya October 18, 2024

    🙏🙏
  • Harsh Ajmera October 14, 2024

    Love from hazaribagh 🙏🏻
  • Vivek Kumar Gupta October 13, 2024

    नमो ..🙏🙏🙏🙏🙏
  • Vivek Kumar Gupta October 13, 2024

    नमो ......................🙏🙏🙏🙏🙏
  • Lal Singh Chaudhary October 07, 2024

    बनी रहती है जिसकी हमेशा चाहत, कहते हैं हम उसे सफलता। दूआ ही नहीं पूरी चाहत है मेरी हमें प्राप्त हो तुम्हारी सफलता।। भारत भाग्य विधाता मोदी जी को जय श्री राम
  • Manish sharma October 04, 2024

    🇮🇳
  • கார்த்திக் September 21, 2024

    🪷ஜெய் ஸ்ரீ ராம்🪷जय श्री राम🪷જય શ્રી રામ🪷 🪷ಜೈ ಶ್ರೀ ರಾಮ್🌸🪷జై శ్రీ రామ్🪷JaiShriRam🪷🌸 🪷জয় শ্ৰী ৰাম🪷ജയ് ശ്രീറാം🪷ଜୟ ଶ୍ରୀ ରାମ🪷🌸
  • Himanshu Adhikari September 18, 2024

    Jai ho
  • Dheeraj Thakur September 16, 2024

    जय श्री राम जय श्री राम
  • Dheeraj Thakur September 16, 2024

    जय श्री राम
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
We've to achieve greater goals of strong India, says PM Narendra Modi

Media Coverage

We've to achieve greater goals of strong India, says PM Narendra Modi
NM on the go

Nm on the go

Always be the first to hear from the PM. Get the App Now!
...
Prime Minister condoles the passing of His Highness Prince Karim Aga Khan IV
February 05, 2025

The Prime Minister, Shri Narendra Modi today condoled the passing of His Highness Prince Karim Aga Khan IV. PM lauded him as a visionary, who dedicated his life to service and spirituality. He hailed his contributions in areas like health, education, rural development and women empowerment.

In a post on X, he wrote:

“Deeply saddened by the passing of His Highness Prince Karim Aga Khan IV. He was a visionary, who dedicated his life to service and spirituality. His contributions in areas like health, education, rural development and women empowerment will continue to inspire several people. I will always cherish my interactions with him. My heartfelt condolences to his family and the millions of followers and admirers across the world.”