ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಕಿಂಗ್‌ಡಂನ ಪ್ರಧಾನ ಮಂತ್ರಿ ರಿಷಿ ಸುನಕ್ ಜೊತೆ ದೂರವಾಣಿ ಸಂಭಾಷಣೆ ನಡೆಸಿದರು. ಸನ್ಮಾನ್ಯ . ತಮ್ಮ ಅಧಿಕಾರಾವಧಿಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಿಷಿ ಸುನಕ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದರು.
ವ್ಯಾಪಾರ, ಹೂಡಿಕೆ, ಉದಯೋನ್ಮುಖ ತಂತ್ರಜ್ಞಾನ, ರಕ್ಷಣೆ, ಭದ್ರತೆ, ಆರೋಗ್ಯ ಮತ್ತು ಇತರ ಕ್ಷೇತ್ರಗಳನ್ನು ಒಳಗೊಂಡಂತೆ ದ್ವಿಪಕ್ಷೀಯ ಸಮಗ್ರ ಸ್ಟಾರ್ಟೆಜಿಕ್ ಪಾಲುದಾರಿಕೆಯನ್ನು ಬಲಪಡಿಸುವುದನ್ನು ಮುಂದುವರಿಸಲು ನಾಯಕರು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು. ಪರಸ್ಪರ ಲಾಭದಾಯಕ ಮುಕ್ತ ವ್ಯಾಪಾರ ಒಪ್ಪಂದದ ಆರಂಭಿಕ ತೀರ್ಮಾನಕ್ಕೆ ಪ್ರಗತಿಯನ್ನು ಅವರು ಸ್ವಾಗತಿಸಿದರು.
ಉಭಯ ನಾಯಕರು ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಬೆಳವಣಿಗೆಗಳು ಮತ್ತು ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಉಭಯ ನಾಯಕರು ಭಯೋತ್ಪಾದನೆ, ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಮತ್ತು ನಾಗರಿಕರ ಜೀವಹಾನಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಪ್ರಾದೇಶಿಕ ಶಾಂತಿ, ಭದ್ರತೆ, ಸ್ಥಿರತೆ ಮತ್ತು ನಿರಂತರ ಮಾನವೀಯ ನೆರವಿನ ಅಗತ್ಯವಿದೆ ಎಂದು ಉಭಯ ನಾಯಕರು ಒಪ್ಪಿಕೊಂಡರು.
ಉಭಯ ನಾಯಕರು ಸಂಪರ್ಕದಲ್ಲಿರಲು ಒಪ್ಪಿಕೊಂಡರು ಮತ್ತು ದೀಪಾವಳಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.