ಕೋವಿಡ್-19 ಸಾಂಕ್ರಾಮಿಕ ಸೋಂಕು ನಿಯಂತ್ರಣಕ್ಕೆ ಭಾರತ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಗೆ ಆಸ್ಟ್ರೇಲಿಯಾ ಮಾನ್ಯತೆ (ಮನ್ನಣೆ) ನೀಡಿರುವುದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು; “ಭಾರತದ ಕೊವ್ಯಾಕ್ಸಿನ್ ಲಸಿಕೆಗೆ ಆಸ್ಟ್ರೇಲಿಯಾ ದೇಶ ಮಾನ್ಯತೆ ನೀಡಿದೆ. ಇದಕ್ಕಾಗಿ ನಾನು ನನ್ನ ಆತ್ಮೀಯ ಸ್ನೇಹಿತ ಸ್ಕಾಟ್ ಮಾರಿಸನ್ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಕೋವಿಡ್ ನಂತರದ ಭಾರತ-ಆಸ್ಟ್ರೇಲಿಯಾ ಪಾಲುದಾರಿಕೆಯನ್ನು ಮುಂದಕ್ಕೆ ಕೊಂಡೊಯ್ಯಲು ಇದೊಂದು ಮಹತ್ವದ ಹೆಜ್ಜೆಯಾಗಿದೆ” ಎಂದು ಬಣ್ಣಿಸಿದ್ದಾರೆ.
I thank my dear friend @ScottMorrisonMP for Australia’s recognition of India's COVAXIN. It is an important step forward in the post-COVID partnership between 🇮🇳 and 🇦🇺.
— Narendra Modi (@narendramodi) November 1, 2021