ನಾಗರಿಕ ಸೇವಾ ದಿನವನ್ನು ಗುರುತಿಸುವ ಈ ಕಾರ್ಯಕ್ರಮವು ರಾಷ್ಟ್ರ ನಿರ್ಮಾಣದ ಕಡೆಗೆ ನಾಗರಿಕ ಸೇವಕರನ್ನು ಮತ್ತಷ್ಟು ಪ್ರೇರೇಪಿಸಲು ಮತ್ತು ಸ್ಫೂರ್ತಿಗೊಳಿಸಲು ಪ್ರಧಾನ ಮಂತ್ರಿ ಸೂಕ್ತ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ
ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನ ಮಂತ್ರಿಗಳ ಪ್ರಶಸ್ತಿ ಪ್ರದಾನ ಮಾಡಲಿರುವ ಪ್ರಧಾನಮಂತ್ರಿ
ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023 ರ ಏಪ್ರಿಲ್ 21 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಾಗರಿಕ ಸೇವಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ರಾಷ್ಟ್ರ ನಿರ್ಮಾಣಕ್ಕೆ ನಾಗರಿಕ ಸೇವಕರ ಕೊಡುಗೆಯನ್ನು ಪ್ರಧಾನಮಂತ್ರಿ ಅವರು ನಿರಂತರವಾಗಿ ಶ್ಲಾಘಿಸಿದ್ದಾರೆ ಮತ್ತು ಇನ್ನೂ ಹೆಚ್ಚು ಶ್ರಮಿಸಲು ಅವರನ್ನು ಹುರಿದುಂಬಿಸಿದ್ದಾರೆ. ಈ ಕಾರ್ಯಕ್ರಮವು ದೇಶಾದ್ಯಂತದ ನಾಗರಿಕ ಸೇವಕರನ್ನು ಪ್ರೇರೇಪಿಸಲು ಮತ್ತು ಸ್ಫೂರ್ತಿಗೊಳಿಸಲು ಪ್ರಧಾನಿಗೆ ಸೂಕ್ತ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ, ಇದರಿಂದಾಗಿ ಅವರು ಅದೇ ಉತ್ಸಾಹದಿಂದ ವಿಶೇಷವಾಗಿ ಅಮೃತ್ ಕಾಲ್ ನ ಈ ನಿರ್ಣಾಯಕ ಹಂತದಲ್ಲಿ ರಾಷ್ಟ್ರಕ್ಕೆ ಸೇವೆ ಸಲ್ಲಿಸಬಹುದು.
ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಾರ್ವಜನಿಕ ಆಡಳಿತದಲ್ಲಿನ ಶ್ರೇಷ್ಠತೆಗಾಗಿ ಪ್ರಧಾನ ಮಂತ್ರಿಗಳ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಸಾಮಾನ್ಯ ನಾಗರಿಕರ ಕಲ್ಯಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಿಲ್ಲೆಗಳು ಮತ್ತು ಸಂಸ್ಥೆಗಳು ಮಾಡಿದ ಅಸಾಧಾರಣ ಮತ್ತು ನವೀನ ಕೆಲಸಗಳನ್ನು ಗುರುತಿಸುವ ಉದ್ದೇಶದಿಂದ ಇವುಗಳನ್ನು ಸ್ಥಾಪಿಸಲಾಗಿದೆ.
ಗುರುತಿಸಲಾದ ನಾಲ್ಕು ಆದ್ಯತೆಯ ಕಾರ್ಯಕ್ರಮಗಳಲ್ಲಿ ಮಾಡಿದ ಅನುಕರಣೀಯ ಕೆಲಸಗಳಿಗೆ ಪ್ರಶಸ್ತಿಗಳನ್ನು ನೀಡಲಾಗುವುದು: ಹರ್ ಘರ್ ಜಲ ಯೋಜನೆಯ ಮೂಲಕ ಸ್ವಚ್ಛ ಜಲವನ್ನು ಉತ್ತೇಜಿಸುವುದು; ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ ಮೂಲಕ ಸ್ವಸ್ಥ ಭಾರತವನ್ನು ಉತ್ತೇಜಿಸುವುದು; ಸಮಗ್ರ ಶಿಕ್ಷಾ ಮೂಲಕ ಸಮಾನ ಮತ್ತು ಅಂತರ್ಗತ ತರಗತಿಯ ವಾತಾವರಣದೊಂದಿಗೆ ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸುವುದು; ಮಹತ್ವಾಕಾಂಕ್ಷೆಯ ಜಿಲ್ಲಾ ಕಾರ್ಯಕ್ರಮದ ಮೂಲಕ ಸಮಗ್ರ ಅಭಿವೃದ್ಧಿ - ಪರಿಪೂರ್ಣತೆಯ ವಿಧಾನದ ಮೇಲೆ ವಿಶೇಷ ಗಮನದೊಂದಿಗೆ ಒಟ್ಟಾರೆ ಪ್ರಗತಿ. ಮೇಲಿನ ನಾಲ್ಕು ಗುರುತಿಸಲಾದ ಕಾರ್ಯಕ್ರಮಗಳಿಗೆ ಎಂಟು ಪ್ರಶಸ್ತಿಗಳನ್ನು ನೀಡಲಾಗುವುದು ಮತ್ತು ಆವಿಷ್ಕಾರಗಳಿಗಾಗಿ ಏಳು ಪ್ರಶಸ್ತಿಗಳನ್ನು ನೀಡಲಾಗುವುದು.