ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್ಗಾರ್ ಮೇಳವು ಒಂದು ಪ್ರಮುಖ ಹೆಜ್ಜೆಯಾಗಿದೆ
ಹೊಸದಾಗಿ ನೇಮಕಗೊಂಡವರು ಆನ್ಲೈನ್ ಮಾಡ್ಯೂಲ್ ಕರ್ಮಯೋಗಿ ಪ್ರಾರಂಭ್ ಮೂಲಕ ತರಬೇತಿ ಪಡೆಯಲಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26 ಸೆಪ್ಟೆಂಬರ್, 2023 ರಂದು 10:30 AM ಕ್ಕೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ 51,000 ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಪ್ರಧಾನಿಯವರು ಈ ಸಂದರ್ಭದಲ್ಲಿ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ದೇಶಾದ್ಯಂತ 46 ಸ್ಥಳಗಳಲ್ಲಿ ರೋಜ್ಗಾರ್ ಮೇಳ ನಡೆಯಲಿದೆ. ಈ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು/ಕೇಂದ್ರ ಆಡಳಿತ ಪ್ರದೇಶಗಳಲ್ಲಿ ನೇಮಕಾತಿಗಳು ನಡೆಯುತ್ತಿವೆ. ದೇಶದಾದ್ಯಂತದ ಅಂಚೆ ಇಲಾಖೆ, ಭಾರತೀಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಪರಮಾಣು ಶಕ್ತಿ ಇಲಾಖೆ, ಕಂದಾಯ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಸಚಿವಾಲಯ ಸೇರಿದಂತೆ ವಿವಿಧ ಸಚಿವಾಲಯಗಳು/ಇಲಾಖೆಗಳಲ್ಲಿ ಸರ್ಕಾರಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇತರವುಗಳಲ್ಲಿ ಹೊಸ ನೇಮಕಾತಿಗಳು ಇರಲಿವೆ.

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್ಗಾರ್ ಮೇಳವು ಒಂದು ಪ್ರಮುಖ ಹೆಜ್ಜೆಯಾಗಿದೆ. ರೋಜ್ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ಹೊಸದಾಗಿ ಸೇರ್ಪಡೆಗೊಂಡವರು ಐಜಿಒಟಿ ಕರ್ಮಯೋಗಿ ಪೋರ್ಟಲ್ ನಲ್ಲಿ ಆನ್ಲೈನ್ ಮಾಡ್ಯೂಲ್ ಆಗಿರುವ ಕರ್ಮಯೋಗಿ ಪ್ರಾರಂಭ್ ಮೂಲಕ ತರಬೇತಿ ಪಡೆಯುವ ಅವಕಾಶವನ್ನು ಪಡೆಯಲಿದ್ದಾರೆ. ಅಲ್ಲಿ 680 ಕ್ಕೂ ಹೆಚ್ಚು ಇ-ಲರ್ನಿಂಗ್ ಕೋರ್ಸ್ ಗಳನ್ನು 'ಎಲ್ಲಿಯಾದರೂ ಯಾವುದೇ ಸಾಧನ' ಕಲಿಕೆಯ ಸ್ವರೂಪಕ್ಕಾಗಿ ಲಭ್ಯಗೊಳಿಸಲಾಗಿದೆ.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Snacks, Laughter And More, PM Modi's Candid Moments With Indian Workers In Kuwait

Media Coverage

Snacks, Laughter And More, PM Modi's Candid Moments With Indian Workers In Kuwait
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 22 ಡಿಸೆಂಬರ್ 2024
December 22, 2024

PM Modi in Kuwait: First Indian PM to Visit in Decades

Citizens Appreciation for PM Modi’s Holistic Transformation of India