ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡೀಯೋ ಕಾನ್ಫರೆನ್ಸಿಂಗ್ ಮೂಲಕ ಜನವರಿ 15 ರಂದು ಬೆಳಿಗ್ಗೆ 10:30 ಕ್ಕೆ ಸಿಕಂದರಾಬಾದ್ ಮತ್ತು ವಿಶಾಖಪಟ್ಟಣಂ ಅನ್ನು ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ.
ಈ ರೈಲು ಭಾರತೀಯ ರೈಲ್ವೇಯಿಂದ ಪರಿಚಯಿಸಲಾದ ಎಂಟನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿರುತ್ತದೆ.ಅಲ್ಲದೇ ಈ ರೈಲು ತೆಲುಗು ಭಾಷೆ ಮಾತನಾಡುವ ಎರಡು ರಾಜ್ಯಗಳಾದ ತೆಲಂಗಾಣ ಮತ್ತು ಆಂಧ್ರಪ್ರದೇಶವನ್ನು ಸಂಪರ್ಕಿಸುವ ಮೊದಲನೆಯ ರೈಲು ಸಹ ಆಗಿದೆ.ಇದು ಸುಮಾರು 700 ಕಿ.ಮೀ. ಆಂಧ್ರಪ್ರದೇಶದ ವಿಶಾಖಪಟ್ಟಣಂ, ರಾಜಮಂಡ್ರಿ ಮತ್ತು ವಿಜಯವಾಡ ನಿಲ್ದಾಣಗಳಲ್ಲಿ ಮತ್ತು ತೆಲಂಗಾಣದ ಖಮ್ಮಂ, ವಾರಂಗಲ್ ಮತ್ತು ಸಿಕಂದರಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಯನ್ನು ಹೊಂದಿರುತ್ತದೆ.
ಸ್ಥಳೀಯವಾಗಿ ವಿನ್ಯಾಸಗೊಳಿಸಲಾದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೆಟ್ ಅತ್ಯಾಧುನಿಕ ಪ್ರಯಾಣಿಕರ ಸೌಕರ್ಯಗಳನ್ನು ಹೊಂದಿದೆ ಮತ್ತು ರೈಲು ಬಳಕೆದಾರರಿಗೆ ವೇಗವಾದ, ಆರಾಮದಾಯಕ ಮತ್ತು ಅನುಕೂಲಕರ ಪ್ರಯಾಣದ ಅನುಭವವನ್ನು ನೀಡುತ್ತದೆ.