ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ನವದೆಹಲಿಯ ತಮ್ಮ ನಿವಾಸದಲ್ಲಿಂದು ಸಂಜೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೂರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಮಾಹಿತಿಯನ್ನು ಪೋಸ್ಟ್ ಮಾಡಿರುವ ಪ್ರಧಾನಮಂತ್ರಿಯವರು, ಈ ಸಭೆಗಳು ಮೂರು ರಾಷ್ಟ್ರಗಳೊಂದಿಗೆ ಭಾರತದ ದ್ವಿಪಕ್ಷೀಯ ಬಾಂಧವ್ಯ ಬಲವರ್ಧನೆ ಮತ್ತು ಅಭಿವೃದ್ಧಿ ವಲಯದ ಸಹಕಾರವನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.
ಎಕ್ಸ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಪೋಸ್ಟ್ ಮಾಡಿದ್ದಾರೆ.
“ಇಂದು ಸಂಜೆ ತಮ್ಮ ನಿವಾಸದಲ್ಲಿ ನಡೆಯಲಿರುವ ಮೂರು ದ್ವಿಪಕ್ಷೀಯ ಸಭೆಗಳನ್ನು ಎದುರು ನೋಡುತ್ತಿದ್ದೇನೆ. ಮಾರಿಷಸ್ ಪ್ರಧಾನಿ@ಕುಮಾರ್ ಜುಗ್ನೌತ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು @ಪೊಟುಸ್ @ ಜೋಬೈಡನ್ ಅವರನ್ನು ಭೇಟಿ ಮಾಡುತ್ತಿದ್ದೇನೆ. ಈ ಮೂರು ದೇಶಗಳೊಂದಿಗೆ ಭಾರತದ ದ್ವಿಪಕ್ಷೀಯ ಬಾಂಧವ್ಯ ಬಲರ್ಧನೆಗೆ ಇದು ಅವಕಾಶವಾಗಿದೆ ಮತ್ತು ಇದರಿಂದ ಅಭಿವೃದ್ಧಿ ವಲಯದ ಸಹಕಾರ ಮತ್ತಷ್ಟು ಗಟ್ಟಿಯಾಗಲಿದೆ” ಎಂದಿದ್ದಾರೆ.
This evening, I look forward to three bilateral meetings at my residence.
— Narendra Modi (@narendramodi) September 8, 2023
I will be meeting Mauritius PM @KumarJugnauth, Bangladesh PM Sheikh Hasina and @POTUS @JoeBiden.
The meetings will give an opportunity to review India's bilateral ties with these nations and further…