ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ 25, ಫೆಬ್ರವರಿ 2023 ರಂದು ಸಂಜೆ 5 ಗಂಟೆಗೆ ದೆಹಲಿಯ ತಾಲ್ಕಟೋರಾ ಸ್ಟೇಡಿಯಂನಲ್ಲಿ ‘ಬಾರಿಸು ಕನ್ನಡ ಡಿಂ ಡಿಮವ ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಮಂತ್ರಿಯವರ ‘ಏಕ ಭಾರತ ಶ್ರೇಷ್ಠ ಭಾರತ’ದ ಆಶಯಕ್ಕೆ ಅನುಗುಣವಾಗಿ ಕರ್ನಾಟಕದ ಸಂಸ್ಕೃತಿ, ಸಂಪ್ರದಾಯ ಮತ್ತು ಇತಿಹಾಸವನ್ನು ಕೊಂಡಾಡಲು ‘ಬಾರಿಸು ಕನ್ನಡ ಡಿಂ ಡಿಮವ’ ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗುತ್ತಿದೆ.
"ಆಜಾದಿ ಕಾ ಅಮೃತ್ ಮಹೋತ್ಸವ"ದ ಆಶ್ರಯದಲ್ಲಿ ನಡೆಯುತ್ತಿರುವ ಈ ಉತ್ಸವವು ನೂರಾರು ಕಲಾವಿದರಿಗೆ ನೃತ್ಯ, ಸಂಗೀತ, ನಾಟಕ, ಕಾವ್ಯ ಇತ್ಯಾದಿಗಳ ಮೂಲಕ ಕರ್ನಾಟಕದ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುತ್ತದೆ.