ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 2021ರ ಅಕ್ಟೋಬರ್ 21ರಂದು ಬೆಳಗ್ಗೆ 10.30ಕ್ಕೆ ನವದೆಹಲಿಯ ಏಮ್ಸ್ ನ ಝಜರ್ ಆವರಣದ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ವಿಶ್ರಾಮ ಸದನವನ್ನು ಉದ್ಘಾಟಿಸಲಿದ್ದು, ಈ ಸಂದರ್ಭದಲ್ಲಿ ಭಾಷಣ ಮಾಡಲಿದ್ದಾರೆ.
ಕ್ಯಾನ್ಸರ್ ರೋಗಿಗಳ ಆರೈಕೆಗಾಗಿ ಜೊತೆಯಲ್ಲಿ ಬಂದು ದೀರ್ಘ ಸಮಯದವರೆಗೆ ಆಸ್ಪತ್ರೆಯಲ್ಲಿಯೇ ಉಳಿಯಬೇಕಾಗುವಂತವರಿಗೆ ವಸತಿ ಸೌಲಭ್ಯ ಕಲ್ಪಿಸಲು 806 ಹಾಸಿಗೆಗಳ ಸಂಪೂರ್ಣ ಹವಾನಿಯಂತ್ರಿತ ವಿಶ್ರಾಮ ಸದನವನ್ನು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ಇನ್ಫೋಸಿಸ್ ಪ್ರತಿಷ್ಠಾನ ನಿರ್ಮಾಣ ಮಾಡಿದೆ. ಈ ಸದನವನ್ನು ಪ್ರತಿಷ್ಠಾನ 93 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿದೆ. ಈ ಸದನವು ಎನ್.ಸಿ.ಐ.ನ ಆಸ್ಪತ್ರೆ ಮತ್ತು ಹೊರರೋಗಿಗಳ ವಿಭಾಗಕ್ಕೆ ತುಂಬಾ ಸಮೀಪದಲ್ಲಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀ ಮನ್ಸುಖ್ ಮಾಂಡವೀಯ, ಹರಿಯಾಣ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಕಠ್ಠರ್, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ ಸುಧಾಮೂರ್ತಿ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.