ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಗುಜರಾತ್ ನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳ ಜತೆ ಸಂವಾದ ನಡೆಸಲಿದ್ದಾರೆ. ಆಗಸ್ಟ್ 3ರಂದು ಮಧ್ಯಾಹ್ನ 12.30ಕ್ಕೆ ವೀಡಿಯೊ ಕಾನ್ಫರೆನ್ಸ್ ಸಂವಾದ ಕಾರ್ಯಕ್ರಮ ಆಯೋಜಿತವಾಗಿದೆ.
ಗರೀಬ್ ಕಲ್ಯಾಣ ಅನ್ನ ಯೋಜನೆಯ ಬಗ್ಗೆ ಜನರಲ್ಲಿ ಮತ್ತಷ್ಟು ಜಾಗೃತಿ ಮೂಡಿಸುವ ಸಲುವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾರ್ವಜನಿಕರ ಪಾಲ್ಗೊಳ್ಳುವಿಕೆ ಕಾರ್ಯಕ್ರಮವನ್ನು ಅನಾವರಣಗೊಳಿಸಲಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ (ಪಿಎಂಜಿಕೆಎವೈ) ಕುರಿತು
ಪಿಎಂಜಿಕೆಎವೈ ದೇಶದ ಬಡ ಜನರಿಗೆ ಆಹಾರ ಭದ್ರತೆ ಒದಗಿಸುವ ಕಲ್ಯಾಣ ಕಾರ್ಯಕ್ರಮವಾಗಿದ್ದು, ಕೋವಿಡ್-19 ಸಾಂಕ್ರಾಮಿಕ ಸೋಂಕಿನಿಂದ ಆರ್ಥಿಕ ದುಷ್ಪರಿಣಾಮಗಳನ್ನು ಎದುರಿಸಿದ ಜನರಿಗೆ ಸಹಾಯ ಮಾಡಲು ಮತ್ತು ನೆರವಾಗಲು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ಯೋಜನೆಗೆ ಒತ್ತು ನೀಡಿದ್ದಾರೆ. ಪಿಎಂಜಿಕೆಎವೈ ಯೋಜನೆ ಅಡಿ, ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಗೆ ಒಳಪಡುವ ಪ್ರತಿ ಫಲಾನುಭವಿಗೆ ಮಾಸಿಕ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯ ಒದಗಿಸಲಾಗುತ್ತಿದೆ.