ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ.21ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಾರಾಣಸಿಯ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಮತ್ತು ಇತರೆ ಮುಂಚೂಣಿ ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ.
ಇದೇ ವೇಳೆ ಪ್ರಧಾನಮಂತ್ರಿ ಅವರು ಡಿಆರ್ ಡಿಒ ಮತ್ತು ಭಾರತೀಯ ಸೇನೆಯ ಜಂಟಿ ಪ್ರಯತ್ನಗಳ ಮೂಲಕ ಆರಂಭಿಸಲಾಗಿರುವ ಪಂಡಿತ್ ರಾಜನ್ ಮಿಶ್ರಾ ಕೋವಿಡ್ ಆಸ್ಪತ್ರೆ ಸೇರಿದಂತೆ ವಾರಾಣಸಿಯ ನಾನಾ ಕೋವಿಡ್ ಆಸ್ಪತ್ರೆಗಳ ಕಾರ್ಯ ನಿರ್ವಹಣೆ ಕುರಿತು ಪರಾಮರ್ಶೆ ನಡೆಸಲಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿನ ಇತರೆ ಕೋವಿಡೇತರ ಆಸ್ಪತ್ರೆಗಳ ಕಾರ್ಯ ನಿರ್ವಹಣೆಯನ್ನೂ ಸಹ ಅವರು ಅವಲೋಕಿಸುವರು.
ಪ್ರಧಾನಮಂತ್ರಿ ಅವರು ವಾರಾಣಸಿಯಲ್ಲಿ ಕೋವಿಡ್ ಎರಡನೇ ಅಲೆ ನಿರ್ವಹಣೆಗೆ ಸದ್ಯ ಕೈಗೊಂಡಿರುವ ಪ್ರಯತ್ನಗಳು ಮತ್ತು ಭವಿಷ್ಯಕ್ಕಾಗಿ ಕೈಗೊಂಡಿರುವ ಸಿದ್ಧತೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.