ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿ-ಗಾಜಿಯಾಬಾದ್-ಮೀರತ್ ಆರ್ ಆರ್ ಟಿಎಸ್ ಕಾರಿಡಾರ್‌ನ ಆದ್ಯತೆಯ ವಿಭಾಗವನ್ನು ಉತ್ತರ ಪ್ರದೇಶದ ಸಾಹಿಬಾಬಾದ್ ರಾಪಿಡ್ಎಕ್ಸ್ ನಿಲ್ದಾಣದಲ್ಲಿ ಅಕ್ಟೋಬರ್ 20 ರಂದು ಬೆಳಿಗ್ಗೆ 11:15 ಕ್ಕೆ ಉದ್ಘಾಟಿಸಲಿದ್ದಾರೆ. ಭಾರತದಲ್ಲಿ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್‌ಆರ್‌ಟಿಎಸ್) ಆರಂಭದ ಅಂಗವಾಗಿ ಅವರು ಸಾಹಿಬಾಬಾದ್‌ನಿಂದ ದುಹೈ ಡಿಪೋಗೆ ಸಂಪರ್ಕಿಸುವ ರಾಪಿಡ್‌ಎಕ್ಸ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಅವರು ಸಾಹಿಬಾಬಾದ್‌ನಲ್ಲಿ ಸಾರ್ವಜನಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ, ಅಲ್ಲಿ ಅವರು ದೇಶದಲ್ಲಿ ಆರ್‌ಆರ್‌ಟಿಎಸ್ ಅನ್ನು ಆರಂಭಿಸುತ್ತಿರುವ ವೇಳೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ, ಅವರು ಬೆಂಗಳೂರು ಮೆಟ್ರೋದ ಪೂರ್ವ ಪಶ್ಚಿಮ ಕಾರಿಡಾರ್‌ನ ಎರಡು ವಿಸ್ತರಿತ ಮಾರ್ಗಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.
ದೆಹಲಿ-ಘಾಜಿಯಾಬಾದ್-ಮೀರತ್ ಆರ್ ಆರ್ ಟಿಎಸ್ ಕಾರಿಡಾರ್
ದೆಹಲಿ-ಗಾಜಿಯಾಬಾದ್-ಮೀರತ್ ಆರ್ ಆರ್ ಟಿಎಸ್ ಕಾರಿಡಾರ್‌ನ 17 ಕಿಮೀ ಆದ್ಯತೆಯ ಮಾರ್ಗವು ಉದ್ಘಾಟನೆಗೊಳ್ಳಲಿದ್ದು, ಅದು ಸಾಹಿಬಾಬಾದ್‌ನಿಂದ 'ದುಹೈ ಡಿಪೋ' ಗೆ ಘಾಜಿಯಾಬಾದ್, ಗುಲ್ಧಾರ್ ಮತ್ತು ದುಹೈ ನಿಲ್ದಾಣಗಳನ್ನು ಸಂಪರ್ಕಿಸುತ್ತದೆ. ದೆಹಲಿ-ಘಾಜಿಯಾಬಾದ್-ಮೀರತ್ ಕಾರಿಡಾರ್‌ಗೆ ಪ್ರಧಾನ ಮಂತ್ರಿ ಅವರು 2019ರ ಮಾರ್ಚ್ 8 ರಂದು ಶಂಕುಸ್ಥಾಪನೆ ನೆರವೇರಿಸಿದ್ದರು.
ಹೊಸ ವಿಶ್ವ ದರ್ಜೆಯ ಸಾರಿಗೆ ಮೂಲಸೌಕರ್ಯಗಳ ನಿರ್ಮಾಣದ ಮೂಲಕ ದೇಶದಲ್ಲಿ ಪ್ರಾದೇಶಿಕ ಸಂಪರ್ಕವನ್ನು ಪರಿವರ್ತಿಸುವ ಪ್ರಧಾನ ಮಂತ್ರಿಯವರ ದೂರದೃಷ್ಟಿಗೆ ಅನುಗುಣವಾಗಿ, ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್‌ಆರ್‌ಟಿಎಸ್) ಯೋಜನೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಆರ್ ಆರ್ ಟಿಎಸ್ ಹೊಸ ರೈಲು-ಆಧಾರಿತ, ಸೆಮಿ-ಹೈಸ್ಪೀಡ್, ಹೆಚ್ಚಿನ ಪ್ರಯಾಣಿಕರ ಸಾರಿಗೆ ವ್ಯವಸ್ಥೆಯಾಗಿದೆ. ಪ್ರತಿ ಗಂಟೆಗೆ 180 ಕಿಲೋಮೀಟರ್ ವಿನ್ಯಾಸದ ವೇಗದೊಂದಿಗೆ, ಆರ್ ಆರ್ ಟಿಎಸ್ ಒಂದು ಪರಿವರ್ತನಾಶೀಲ ಪ್ರಾದೇಶಿಕ ಅಭಿವೃದ್ಧಿ ಉಪಕ್ರಮವಾಗಿದೆ. ಇದು ಪ್ರತಿ 15 ನಿಮಿಷಗಳಿಗೊಮ್ಮೆ ಅಂತರನಗರ ಪ್ರಯಾಣಕ್ಕಾಗಿ ಹೈ-ಸ್ಪೀಡ್ ರೈಲುಗಳನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ, ಇದರಡಿ ರೈಲು ಅವಶ್ಯಕತೆಗೆ ಅನುಗುಣವಾಗಿ ಪ್ರತಿ 5 ನಿಮಿಷಗಳ ಪುನರಾರ್ತನೆ ಆಗುತ್ತಿರುತ್ತದೆ.
ಎನ್‌ಸಿಆರ್‌ನಲ್ಲಿ ಒಟ್ಟು ಎಂಟು ಆರ್‌ಆರ್‌ಟಿಎಸ್ ಕಾರಿಡಾರ್‌ಗಳನ್ನು ಅಭಿವೃದ್ಧಿಪಡಿಸಲು ಗುರುತಿಸಲಾಗಿದೆ, ಅವುಗಳಲ್ಲಿ ಮೂರು ಕಾರಿಡಾರ್‌ಗಳನ್ನು ದೆಹಲಿ - ಘಾಜಿಯಾಬಾದ್ - ಮೀರತ್ ಕಾರಿಡಾರ್ ಸೇರಿದಂತೆ ಒಂದನೇ ಹಂತದಲ್ಲಿ ಜಾರಿಗೊಳಿಸಲು ಆದ್ಯತೆ ನೀಡಲಾಗಿದೆ; ದೆಹಲಿ - ಗುರುಗ್ರಾಮ್ – ಎಸ್ ಎನ್ ಬಿ – ಅಳ್ವಾರ್ ಕಾರಿಡಾರ್; ಮತ್ತು ದೆಹಲಿ - ಪಾಣಿಪತ್ ಕಾರಿಡಾರ್. ದೆಹಲಿ-ಗಾಜಿಯಾಬಾದ್-ಮೀರತ್ ಆರ್ ಆರ್ ಟಿಎಸ್ ಅನ್ನು 30,000 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ ಮತ್ತು ದೆಹಲಿಯಿಂದ ಮೀರತ್‌ಗೆ ಒಂದು ಗಂಟೆಯ ಪ್ರಯಾಣದ ಸಮಯದಲ್ಲಿ ಘಾಜಿಯಾಬಾದ್, ಮುರ್ದಾನಗರ ಮತ್ತು ಮೋದಿನಗರದ ನಗರ ಕೇಂದ್ರಗಳ ಮೂಲಕ ಸಂಪರ್ಕಿ ಕಲ್ಪಿಸುತ್ತದೆ
ಆರ್‌ಆರ್‌ಟಿಎಸ್ ಅನ್ನು ದೇಶದಲ್ಲಿಯೇ ಅಭಿವೃದ್ಧಿಪಡಿಸಲಾಗುತ್ತಿದೆ, ಇದು ಅತ್ಯಾಧುನಿಕ ಪ್ರಾದೇಶಿಕ ಸಂಚಾರಕ್ಕೆ ಪರಿಹಾರವಾಗಿದೆ ಮತ್ತು ಇದು ವಿಶ್ವದ ಅತ್ಯುತ್ತಮವಾದುದಕ್ಕೆ ಹೋಲಿಸಬಹುದಾಗಿದೆ. ಇದು ದೇಶದಲ್ಲಿ ಸುರಕ್ಷಿತ, ವಿಶ್ವಾಸಾರ್ಹ ಮತ್ತು ಆಧುನಿಕ ಅಂತರ ನಗರ ಪ್ರಯಾಣದ ಪರಿಹಾರಗಳನ್ನು ಒದಗಿಸುತ್ತದೆ.
ಪಿಎಂ ಗತಿಶಕ್ತಿ ರಾಷ್ಟ್ರೀಯ ಕ್ರಿಯಾ ಯೋಜನೆಗೆ ಅನುಗುಣವಾಗಿ, ಆರ್ ಆರ್ ಆರ್ ಟಿಎಸ್ ಜಾಲ ರೈಲ್ವೆ ನಿಲ್ದಾಣಗಳು, ಮೆಟ್ರೊ ನಿಲ್ದಾಣಗಳು, ಬಸ್ ಸೇವೆಗಳು ಇತ್ಯಾದಿಗಳೊಂದಿಗೆ ವಿಸ್ತೃತ ಬಹು-ಮಾದರಿ- ಸಂಪರ್ಕವನ್ನು ಹೊಂದಿರುತ್ತದೆ. ಇಂತಹ ಪರಿವರ್ತನಕಾರಿ ಪ್ರಾದೇಶಿಕ ಚಲನಶೀಲತೆ ಪರಿಹಾರಗಳು ಆ ಪ್ರದೇಶದಲ್ಲಿ ಆರ್ಥಿಕ ಚಟುವಟಿಕೆ ಉತ್ತೇಜಿಸುತ್ತದೆ. ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಯ ಅವಕಾಶಗಳನ್ನು ಲಭ್ಯತೆಯನ್ನು ಸುಧಾರಿಸುತ್ತದೆ; ಮತ್ತು ವಾಹನ ದಟ್ಟಣೆ ಮತ್ತು ವಾಯು ಮಾಲಿನ್ಯವನ್ನು ಗಣನೀಯವಾಗಿ ತಗ್ಗಿಸಲು ಸಹಾಯ ಮಾಡುತ್ತದೆ.
ಬೆಂಗಳೂರು ಮೆಟ್ರೊ
ಬೈಯಪ್ಪನಹಳ್ಳಿಯಿದ ಕೃಷ್ಣರಾಜಪುರದವರೆಗೆ ಮತ್ತು ಕೆಂಗೇರಿಯಿಂದ ಚಲ್ಲಘಟ್ಟಕ್ಕೆ ಸಂಪರ್ಕ ಕಲ್ಪಿಸುವ ಎರಡು ಮೆಟ್ರೋ ಮಾರ್ಗಗಳನ್ನು ಪ್ರಧಾನಮಂತ್ರಿ ಅವರು ಅಧಿಕೃತವಾಗಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅಧಿಕೃತ ಉದ್ಘಾಟನೆಗೆ ಕಾಯದೆ ಈ ಕಾರಿಡಾರ್‌ನಲ್ಲಿ ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲವಾಗುವಂತೆ ಈ ಎರಡು ಮೆಟ್ರೋ ಮಾರ್ಗಗಳನ್ನು 2023ರ ಅಕ್ಟೋಬರ್ 9 ರಿಂದ ಸಾರ್ವಜನಿಕ ಸೇವೆಗೆ ಅವಕಾಶ ನೀಡಲಾಗಿದೆ.