ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 11ರಂದು ಬೆಳಗ್ಗೆ 11:15ಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಗುಜರಾತ್‌ನ ವಡ್ತಾಲ್‌ನಲ್ಲಿರುವ ಶ್ರೀ ಸ್ವಾಮಿನಾರಾಯಣ ಮಂದಿರದ 200ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ವಡ್ತಾನ್‌ನಲ್ಲಿರುವ ಶ್ರೀ ಸ್ವಾಮಿನಾರಾಯಣ ಮಂದಿರವು ಅನೇಕ ದಶಕಗಳಿಂದ ಜನರ ಸಾಮಾಜಿಕ ಮತ್ತು ಆಧ್ಯಾತ್ಮಿಕ ಜೀವನದ ಮೇಲೆ ಪ್ರಭಾವ ಬೀರುತ್ತಿದೆ.