ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಡಿಸೆಂಬರ್ 8ರಂದು ಉತ್ತರಾಖಂಡದ ಡೆಹ್ರಾಡೂನ್ ಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10:30 ಕ್ಕೆ ಅವರು ಡೆಹ್ರಾಡೂನಿನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿರುವ 'ಉತ್ತರಾಖಂಡ್ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023' ನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
'ಉತ್ತರಾಖಂಡ್ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023' ಉತ್ತರಾಖಂಡವನ್ನು ಹೊಸ ಹೂಡಿಕೆ ತಾಣವಾಗಿ ಬೆಳೆಸುವ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ. ಎರಡು ದಿನಗಳ ಶೃಂಗಸಭೆ 2023 ರ ಡಿಸೆಂಬರ್ 8 ಮತ್ತು 9 ರಂದು "ಶಾಂತಿಯಿಂದ ಸಮೃದ್ಧಿಗೆ" ಎಂಬ ಶೀರ್ಷಿಕೆ ಅಡಿಯಲ್ಲಿ ನಡೆಯಲಿದೆ.
ಈ ಶೃಂಗಸಭೆಯಲ್ಲಿ ವಿಶ್ವದಾದ್ಯಂತದ ಸಾವಿರಾರು ಹೂಡಿಕೆದಾರರು ಮತ್ತು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಇದರಲ್ಲಿ ಕೇಂದ್ರ ಸಚಿವರು, ವಿವಿಧ ದೇಶಗಳ ರಾಯಭಾರಿಗಳು ಮತ್ತು ಪ್ರಮುಖ ಕೈಗಾರಿಕೋದ್ಯಮಿಗಳು ಪಾಲ್ಗೊಳ್ಳುವರು.