ಮಧ್ಯಪ್ರದೇಶದ ಚತ್ತರ್‌ ‌ಪುರದಲ್ಲಿ ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಲಿದ್ದಾರೆ
ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025 ಅನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ
ಬಿಹಾರದ ಭಾಗಲ್ ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಪಿಎಂ ಕಿಸಾನ್‌ ನ 19 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ
ಅಸ್ಸಾಂನ ಗುವಾಹಟಿಯಲ್ಲಿ "ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025" ಅನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ
ಅಸ್ಸಾಂನ ಗುವಾಹಟಿಯಲ್ಲಿ ಜುಮೋಯಿರ್ ಬಿನಂದಿನಿ (ಮೆಗಾ ಜುಮೋಯಿರ್) 2025 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಲಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 23 ರಿಂದ 25, 2025 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ.  ಫೆಬ್ರವರಿ 23, 2025 ರಂದು, ಅವರು ಮಧ್ಯಪ್ರದೇಶದ ಛತ್ತರ್‌ ಪುರ ಜಿಲ್ಲೆಯಲ್ಲಿ ಪ್ರಯಾಣಿಸಲಿದ್ದಾರೆ ಮತ್ತು ಅಂದು ಮಧ್ಯಾಹ್ನ 2 ಗಂಟೆಗೆ, ಪ್ರಧಾನಮಂತ್ರಿಯವರು ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ.  ಫೆಬ್ರವರಿ 24 ,2025 ರಂದು, ಸುಮಾರು 10 ಗಂಟೆಗೆ, ಪ್ರಧಾನಮಂತ್ರಿಯವರು ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಲಿದ್ದಾರೆ.  ನಂತರ, ಅವರು ಬಿಹಾರದ ಭಾಗಲ್ಪುರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 2:15 ರ ಸುಮಾರಿಗೆ, ಪ್ರಧಾನಮಂತ್ರಿಯವರು ಪಿಎಂ ಕಿಸಾನ್ ಯೋಜನೆಯ 19 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು ಬಿಹಾರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.  ಹಾಗೂ ಆನಂತರ ಅವರು ಅಸ್ಸಾಂನ ಗುವಾಹಟಿಗೆ ಪ್ರಯಾಣಿಸಲಿದ್ದಾರೆ ಮತ್ತು ಸಂಜೆ 6 ಗಂಟೆಗೆ ಅವರು "ಜುಮೋಯಿರ್ ಬಿನಂದಿನಿ (ಮೆಗಾ ಜುಮೋಯಿರ್) 2025" ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.  ಫೆಬ್ರವರಿ 25 ರಂದು, ಬೆಳಗ್ಗೆ ಸುಮಾರು 10:45 ಗಂಟೆಗೆ, ಪ್ರಧಾನಮಂತ್ರಿಯವರು ಗುವಾಹಟಿಯಲ್ಲಿ "ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025" ಅನ್ನು ಉದ್ಘಾಟಿಸಲಿದ್ದಾರೆ.

ಮಧ್ಯಪ್ರದೇಶದಲ್ಲಿ ಪ್ರಧಾನಮಂತ್ರಿ

ಮಧ್ಯಪ್ರದೇಶದ ಛತ್ತರ್‌ ಪುರ ಜಿಲ್ಲೆಯ ಗರ್ಹಾ ಗ್ರಾಮದಲ್ಲಿ ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಲಿದ್ದಾರೆ. ಎಲ್ಲಾ ವರ್ಗದ ಜನರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಖಾತ್ರಿಪಡಿಸುವ ಕ್ಯಾನ್ಸರ್ ಆಸ್ಪತ್ರೆಯು 200 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗುವ ಆಸ್ಪತ್ರೆಯಲ್ಲಿ ಸೌಲಭ್ಯ ವಂಚಿತ ಕ್ಯಾನ್ಸರ್ ರೋಗಿಗಳಿಗೆ ಉತ್ತಮ ಮೌಲ್ಯದ  ಉಚಿತ ಚಿಕಿತ್ಸೆ ನೀಡಲಿದೆ ಮತ್ತು ಈ ಆಸ್ಪತ್ರೆಯು ಅತ್ಯಾಧುನಿಕ ಯಂತ್ರಗಳನ್ನು ಹಾಗೂ ತಜ್ಞ ವೈದ್ಯರನ್ನು ಕೂಡ ಹೊಂದಿರುತ್ತದೆ.

ಪ್ರಧಾನಮಂತ್ರಿಯವರು ಭೋಪಾಲ್‌ ನಲ್ಲಿ ಎರಡು ದಿನಗಳ "ಜಾಗತಿಕ ಹೂಡಿಕೆದಾರರ ಶೃಂಗಸಭೆ (ಜಿಐಎಸ್) 2025" ಅನ್ನು ಉದ್ಘಾಟಿಸಲಿದ್ದಾರೆ. ಮಧ್ಯಪ್ರದೇಶವನ್ನು ಜಾಗತಿಕ ಹೂಡಿಕೆ ಕೇಂದ್ರವಾಗಿ ಸ್ಥಾಪಿಸಲು ಪ್ರಮುಖ ವೇದಿಕೆಯಾಗಿ ಈ ಸಮಾವೇಶ ಕಾರ್ಯಕ್ರಮ ಕಾರ್ಯನಿರ್ವಹಿಸುತ್ತಿದೆ, ಜಿಐಎಸ್ ಹಲವಾರು ವಿಷಯಾಧಾರಿತ ವಿಭಾಗೀಯ ಶೃಂಗಸಭೆಗಳನ್ನು ಕೂಡ ಒಳಗೊಂಡಿರುತ್ತದೆ;  ಫಾರ್ಮಾ ಮತ್ತು ವೈದ್ಯಕೀಯ ಸಾಧನಗಳು, ಸಾರಿಗೆ ಮತ್ತು ಲಾಜಿಸ್ಟಿಕ್ಸ್, ಕೈಗಾರಿಕೆ, ಕೌಶಲ್ಯ ಅಭಿವೃದ್ಧಿ, ಪ್ರವಾಸೋದ್ಯಮ ಮತ್ತು ಎಂ.ಎಸ್.ಎಂ.ಇ. ಗಳ ಕುರಿತು ವಿಶೇಷ ಅಧಿವೇಶನಗಳನ್ನು ಕೂಡ ಒಳಗೊಂಡಿರುತ್ತದೆ.  ಇದು ಗ್ಲೋಬಲ್ ಸೌತ್ ದೇಶಗಳ ಸಮ್ಮೇಳನ, ಲ್ಯಾಟಿನ್ ಅಮೇರಿಕಾ ಮತ್ತು ಕೆರಿಬಿಯನ್ ಅಧಿವೇಶನ ಮತ್ತು ಪ್ರಮುಖ ಪಾಲುದಾರ ರಾಷ್ಟ್ರಗಳಿಗೆ ವಿಶೇಷ ಅಧಿವೇಶನಗಳಂತಹ ಅಂತರರಾಷ್ಟ್ರೀಯ ಅಧಿವೇಶನಗಳನ್ನು ಸಹ ಒಳಗೊಂಡಿರುತ್ತದೆ.

ಶೃಂಗಸಭೆಯಲ್ಲಿ ಮೂರು ಪ್ರಮುಖ ಕೈಗಾರಿಕಾ ಪ್ರದರ್ಶನಗಳು ನಡೆಯಲಿವೆ.  "ಆಟೋ ಶೋ" ಮಧ್ಯಪ್ರದೇಶದ ವಾಹನ ಸಾಮರ್ಥ್ಯಗಳು ಮತ್ತು ಭವಿಷ್ಯದ ಚಲನಶೀಲತೆ ಪರಿಹಾರಗಳನ್ನು ಪ್ರದರ್ಶಿಸುತ್ತದೆ. "ಜವಳಿ ಮತ್ತು ಫ್ಯಾಷನ್" ಎಕ್ಸ್‌ ಪೋ ಸಾಂಪ್ರದಾಯಿಕ ಮತ್ತು ಆಧುನಿಕ ಜವಳಿ ತಯಾರಿಕೆಯಲ್ಲಿ ರಾಜ್ಯದ ಪರಿಣತಿಯನ್ನು ಎತ್ತಿ ತೋರಿಸುತ್ತದೆ.  "ಒಂದು ಜಿಲ್ಲೆ-ಒಂದು ಉತ್ಪನ್ನ" (ಒಡಿಒಪಿ) ಪ್ರದರ್ಶನವು ರಾಜ್ಯದ ಗ್ರಾಮೀಣ ವಿಶಿಷ್ಟ ಕಲೆಗಾರಿಕೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸುತ್ತದೆ.

60ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು, ವಿವಿಧ ಅಂತರರಾಷ್ಟ್ರೀಯ ಸಂಸ್ಥೆಗಳ ಅಧಿಕಾರಿಗಳು, ಭಾರತದ 300 ಕ್ಕೂ ಹೆಚ್ಚು ಪ್ರಮುಖ ಉದ್ಯಮ ನಾಯಕರು ಮತ್ತು ಇತರ ನೀತಿ ನಿರೂಪಕರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬಿಹಾರದಲ್ಲಿ ಪ್ರಧಾನಮಂತ್ರಿ

ರೈತರ ಕಲ್ಯಾಣಕ್ಕೆ ಪ್ರಧಾನಮಂತ್ರಿಯವರು ಬದ್ಧರಾಗಿದ್ದಾರೆ.  ಇದಕ್ಕೆ ಅನುಗುಣವಾಗಿ, ಬಿಹಾರದ ಭಾಗಲ್ಪುರದಲ್ಲಿ ಅವರು ಹಲವಾರು ಪ್ರಮುಖ ಉಪಕ್ರಮಗಳನ್ನು ಕೈಗೊಳ್ಳಲಿದ್ದಾರೆ.  ಅವರು ಭಾಗಲ್ಪುರದಲ್ಲಿ ಪಿಎಂ ಕಿಸಾನ್‌ನ 19 ನೇ ಕಂತು ಬಿಡುಗಡೆ ಮಾಡಲಿದ್ದಾರೆ. ದೇಶಾದ್ಯಂತ 9.7 ಕೋಟಿಗೂ ಹೆಚ್ಚು ರೈತರು 21,500 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ನೇರ ಆರ್ಥಿಕ ಪ್ರಯೋಜನಗಳನ್ನು ಪಡೆಯಲಿದ್ದಾರೆ.

ರೈತರು ತಮ್ಮ ಉತ್ಪನ್ನಗಳಿಗೆ ಉತ್ತಮ ಸಂಭಾವನೆ ಪಡೆಯಲು ಸಾಧ್ಯವಾಗುವಂತೆ ನೋಡಿಕೊಳ್ಳುವುದರ ನಿಟ್ಟಿನಲ್ಲಿ ಪ್ರಧಾನಮಂತ್ರಿಯವರ ಮಹತ್ವದ ಕಾರ್ಯ ಯೋಜನೆಗಳ ಕಡೆಗೆ ಗಮನಹರಿಸಲಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು, 29 ಫೆಬ್ರವರಿ 2020 ರಂದು, ಪ್ರಧಾನಮಂತ್ರಿಯವರು 10,000 ರೈತ ಉತ್ಪಾದಕ ಸಂಸ್ಥೆಗಳ (ಎಫ್‌ಪಿಒ) ರಚನೆ ಮತ್ತು ಉತ್ತೇಜನಕ್ಕಾಗಿ ಕೇಂದ್ರ ವಲಯ ಯೋಜನೆಯನ್ನು ಪ್ರಾರಂಭಿಸಿದರು, ಇದು ರೈತರಿಗೆ ಸಾಮೂಹಿಕವಾಗಿ ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಮತ್ತು ಉತ್ಪಾದಿಸಲು ಸಹಾಯ ಮಾಡುತ್ತದೆ. ರೈತರಿಗೆ ಪ್ರಧಾನಮಂತ್ರಿಯವರು ನೀಡಿದ ಭರವಸೆಗಳ ಈ ಬದ್ಧತೆಯನ್ನು ಐದು ವರ್ಷಗಳಲ್ಲಿ, ಈಡೇರಿಸಲಾಗಿದೆ. ಅವರು ಕಾರ್ಯಕ್ರಮದಲ್ಲಿ ದೇಶದ 10,000 ನೇ ಎಫ್‌ಪಿಒ ರಚನೆಯ ಮೈಲಿಗಲ್ಲನ್ನು ಕೂಡ ಸ್ಥಾಪಿಸಿ ಗುರಿ ಸಾಧಿಸಿದ್ದಾರೆ.

ಪ್ರಧಾನಮಂತ್ರಿಯವರು ರಾಷ್ಟ್ರೀಯ ಗೋಕುಲ್ ಮಿಷನ್ ಅಡಿಯಲ್ಲಿ ಮೋತಿಹಾರಿಯಲ್ಲಿ ನಿರ್ಮಿಸಲಾದ  ಸ್ಥಳೀಯ ತಳಿಗಳ ಶ್ರೇಷ್ಠತೆಯ ಕೇಂದ್ರವನ್ನು ಕೂಡ ಉದ್ಘಾಟಿಸಲಿದ್ದಾರೆ. ಇದರ ಪ್ರಮುಖ ಉದ್ದೇಶಗಳು ಅತ್ಯಾಧುನಿಕ ಐವಿಎಫ್ ತಂತ್ರಜ್ಞಾನದ ಪರಿಚಯ, ಹೆಚ್ಚಿನ ಪ್ರಸರಣಕ್ಕಾಗಿ ಸ್ಥಳೀಯ ತಳಿಗಳ ಗಣ್ಯ ಪ್ರಾಣಿಗಳ ಉತ್ಪಾದನೆ ಮತ್ತು ಆಧುನಿಕ ಸಂತಾನೋತ್ಪತ್ತಿ ತಂತ್ರಜ್ಞಾನದಲ್ಲಿ ರೈತರು ಮತ್ತು ವೃತ್ತಿಪರರಿಗೆ ತರಬೇತಿ ನೀಡುವುದು, ಸೇರಿದೆ.  3 ಲಕ್ಷ ಹಾಲು ಉತ್ಪಾದಕರಿಗೆ ಸಂಘಟಿತ ಮಾರುಕಟ್ಟೆಯನ್ನು ಸೃಷ್ಟಿಸುವ ಗುರಿ ಹೊಂದಿರುವ ಹಾಲಿನ ಉತ್ಪನ್ನ ಘಟಕವನ್ನು ಅವರು ಬರೌನಿಯಲ್ಲಿ ಉದ್ಘಾಟಿಸಲಿದ್ದಾರೆ.

ಸಂಪರ್ಕ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸುವ ಪ್ರಧಾನಮಂತ್ರಿಯವರ ಬದ್ಧತೆಗೆ ಅನುಗುಣವಾಗಿ, 526 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಾರಿಸಲಿಗಂಜ್ - ನಾವಡಾ - ತಿಲಯ್ಯಾ ರೈಲು ವಿಭಾಗ ಮತ್ತು ಇಸ್ಮಾಯಿಲ್‌ ಪುರ - ರಫಿಗಂಜ್ ರೋಡ್ ಓವರ್ ಬ್ರಿಡ್ಜ್‌ ನ ದ್ವಿಗುಣಗೊಳಿಸುವಿಕೆ ಯೋಜನೆಯನ್ನು ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಅಸ್ಸಾಂನಲ್ಲಿ ಪ್ರಧಾನಮಂತ್ರಿ

ಪ್ರಧಾನಮಂತ್ರಿಯವರು ಜುಮೋಯಿರ್ ಬಿನಂದಿನಿ (ಬೃಹತ್ ಜುಮೋಯಿರ್) 2025ರಲ್ಲಿ ಭಾಗವಹಿಸಲಿದ್ದಾರೆ. ಈ ಜುಮೋಯಿರ್ ಬಿನಂದಿನಿ (ಬೃಹತ್ ಜುಮೋಯಿರ್) 2025 ಕಾರ್ಯಕ್ರಮದಲ್ಲಿ ಸುಮಾರು 8,000 ಪ್ರದರ್ಶಕರು ಭಾಗವಹಿಸಲಿದ್ದಾರೆ. ಈ ಜುಮೋಯಿರ್ ನೃತ್ಯ, ಅಸ್ಸಾಂನ ಚಹಾ ಬುಡಕಟ್ಟು ಮತ್ತು ಅಸ್ಸಾಂನ ಆದಿವಾಸಿ ಸಮುದಾಯಗಳ ಜಾನಪದ ನೃತ್ಯದಲ್ಲಿ ಭಾಗವಹಿಸುವ ಅದ್ಭುತ ಸಾಂಸ್ಕೃತಿಕ ಸಂಭ್ರಮ, ಅಸ್ಸಾಂನ ಏಕತೆ ಮತ್ತು ಸಂಸ್ಕೃತಿಯ ಏಕತೆ ಮತ್ತು ಸಂಸ್ಕೃತಿಯ ಸಂಕೇತವಾಗಿದೆ  ಹಾಗೂ ಇದು ಚಹಾ ಉದ್ಯಮದ 200 ವರ್ಷಗಳ ಸಂಕೇತವಾಗಿದೆ ಮತ್ತು ಅಸ್ಸಾಂನಲ್ಲಿ 200 ವರ್ಷಗಳ ಕೈಗಾರಿಕೀಕರಣದ ಸಂಕೇತವಾಗಿದೆ.

ಫೆಬ್ರವರಿ 25 ರಿಂದ 26, 2025 ರವರೆಗೆ ಅಸ್ಸಾಂನ ಗುವಾಹಟಿಯಲ್ಲಿ ನಡೆಯಲಿರುವ "ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025" ಅನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ.  ಇದು ಉದ್ಘಾಟನಾ ಅಧಿವೇಶನ, ಏಳು ಮಂತ್ರಿಗಳ ಹಂತದ ಅಧಿವೇಶನಗಳು ಮತ್ತು 14 ವಿಷಯಾಧಾರಿತ ಅಧಿವೇಶನಗಳನ್ನು ಒಳಗೊಂಡಿರುತ್ತದೆ.  ಇದು ರಾಜ್ಯದ ಆರ್ಥಿಕ ಭೂದೃಶ್ಯವನ್ನು ವಿವರಿಸುವ ಸಮಗ್ರ ವಸ್ತು ಪ್ರದರ್ಶನವನ್ನು ಒಳಗೊಂಡಿರುತ್ತದೆ, ಅಸ್ಸಾಂನ ಕೈಗಾರಿಕಾ ವಿಕಸನ, ಜಾಗತಿಕ ವ್ಯಾಪಾರ ಪಾಲುದಾರಿಕೆಗಳು, ಪ್ರವರ್ಧಮಾನಕ್ಕೆ ಬರುತ್ತಿರುವ ಕೈಗಾರಿಕೆಗಳು ಮತ್ತು ವೈವಿಧ್ಯಮಯ ಎಂ.ಎಸ್.ಎಂ.ಇ. ವಲಯದ ಮೇಲೆ ಪ್ರದರ್ಶನ ಕೇಂದ್ರೀಕರಿಸುತ್ತದೆ, ಇದು 240 ಕ್ಕೂ ಹೆಚ್ಚು ಪ್ರದರ್ಶಕರನ್ನು ಒಳಗೊಂಡಿರುತ್ತದೆ.

ವಿವಿಧ ಅಂತಾರಾಷ್ಟ್ರೀಯ ಸಂಸ್ಥೆಗಳು, ಜಾಗತಿಕ ನಾಯಕರು ಮತ್ತು ಹೂಡಿಕೆದಾರರು, ನೀತಿ ನಿರೂಪಕರು, ಉದ್ಯಮ ತಜ್ಞರು, ನವೋದ್ಯಮಗಳು ಮತ್ತು ವಿದ್ಯಾರ್ಥಿಗಳು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
2025 reforms form the base for a superstructure to emerge in late 2020s-early 2030s

Media Coverage

2025 reforms form the base for a superstructure to emerge in late 2020s-early 2030s
NM on the go

Nm on the go

Always be the first to hear from the PM. Get the App Now!
...
Prime Minister pays tributes to Shri Atal Bihari Vajpayee ji at ‘Sadaiv Atal’
December 25, 2025

The Prime Minister, Shri Narendra Modi paid tributes at ‘Sadaiv Atal’, the memorial site of former Prime Minister, Atal Bihari Vajpayee ji, on his birth anniversary, today. Shri Modi stated that Atal ji's life was dedicated to public service and national service and he will always continue to inspire the people of the country.

The Prime Minister posted on X:

"पूर्व प्रधानमंत्री श्रद्धेय अटल बिहारी वाजपेयी जी की जयंती पर आज दिल्ली में उनके स्मृति स्थल ‘सदैव अटल’ जाकर उन्हें श्रद्धांजलि अर्पित करने का सौभाग्य मिला। जनसेवा और राष्ट्रसेवा को समर्पित उनका जीवन देशवासियों को हमेशा प्रेरित करता रहेगा।"