PMಚೆನ್ನೈನಲ್ಲಿ ಖೇಲೋ ಇಂಡಿಯಾ ಯೂತ್ ಗೇಮ್ಸ್ 2023ರ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವ ಪ್ರಧಾನಿ
ಡಿಡಿ ಪೊಧಿಗೈ ವಾಹಿನಿಯನ್ನು ಡಿಡಿ ತಮಿಳ್ ಆಗಿ ನವೀಕರಿಸಿದ್ದು, ಹೊಸ ವಾಹಿನಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ; ದೇಶದಲ್ಲಿ ಪ್ರಸಾರ ಕ್ಷೇತ್ರವನ್ನು ಬಲಪಡಿಸುವ 250 ಕೋಟಿ ರೂಪಾಯಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿರುವ ಪ್ರಧಾನಿ
ಬೆಂಗಳೂರಿನಲ್ಲಿ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ ಕ್ಯಾಂಪಸ್ ಉದ್ಘಾಟಿಸಲಿರುವ ಪ್ರಧಾನಮಂತ್ರಿ – ಅಮೆರಿಕ ಹೊರಗೆ ಬೋಯಿಂಗ್‌ ಮಾಡಿರುವ ಅತಿದೊಡ್ಡ ಹೂಡಿಕೆ ಇದಾಗಿದೆ
ಮಹಾರಾಷ್ಟ್ರದಲ್ಲಿ ಸುಮಾರು 2,000 ಕೋಟಿ ರೂ. ಮೌಲ್ಯದ 8 ಅಮೃತ್ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನ ಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 19ರಂದು ಮಹಾರಾಷ್ಟ್ರ, ಕರ್ನಾಟಕ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 10:45ರ ಸುಮಾರಿಗೆ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಪ್ರಧಾನ ಮಂತ್ರಿ ಅವರು ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 2:45ರ ಸುಮಾರಿಗೆ ಪ್ರಧಾನಿ ಅವರು ಕರ್ನಾಟಕದ ಬೆಂಗಳೂರಿನಲ್ಲಿ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಜತೆಗೆ, ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ, ಸಂಜೆ 6 ಗಂಟೆಗೆ ತಮಿಳುನಾಡಿನ ಚೆನ್ನೈನಲ್ಲಿ ಖೇಲೋ ಇಂಡಿಯಾ ಯೂತ್ ಗೇಮ್ಸ್ 2023ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.

ಸೊಲ್ಲಾಪುರದಲ್ಲಿ ಪಿಎಂ

ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಅವರು ಸುಮಾರು 2,000 ಕೋಟಿ ರೂ. ಮೌಲ್ಯದ 8 ಅಮೃತ್ (ಪುನರುಜ್ಜೀವನ ಮತ್ತು ನಗರ ಪರಿವರ್ತನೆಯ ಅಟಲ್ ಮಿಷನ್) ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮಹಾರಾಷ್ಟ್ರದಲ್ಲಿ ಪಿಎಂಎವೈ-ನಗರ ಯೋಜನೆ ಅಡಿ, ಪೂರ್ಣಗೊಂಡ 90,000ಕ್ಕಿಂತ ಹೆಚ್ಚಿನ ಮನೆಗಳನ್ನು ಪ್ರಧಾನ ಮಂತ್ರಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಇದಲ್ಲದೆ, ಅವರು ಸೊಲ್ಲಾಪುರದ ರಾಯನಗರ ಹೌಸಿಂಗ್ ಸೊಸೈಟಿಯ 15,000 ಮನೆಗಳನ್ನು ಸಹ ಲೋಕಾರ್ಪಣೆ ಮಾಡಲಿದ್ದಾರೆ, ಸಾವಿರಾರು ಕೈಮಗ್ಗ ಕಾರ್ಮಿಕರು, ಮಾರಾಟಗಾರರು, ವಿದ್ಯುತ್ ಮಗ್ಗ ಕಾರ್ಮಿಕರು, ಚಿಂದಿ ಆಯುವವರು, ಬೀಡಿ ಕಾರ್ಮಿಕರು, ಚಾಲಕರು ಸೇರಿದಂತೆ ಹಲವರು ಇದರ ಫಲಾನುಭವಿಗಳಾಗಿದ್ದಾರೆ.

ಇದಲ್ಲದೆ, ಕಾರ್ಯಕ್ರಮ ಸಮಯದಲ್ಲಿ ಮಹಾರಾಷ್ಟ್ರದಲ್ಲಿ ಪಿಎಂ-ಸ್ವನಿಧಿಯ 10,000 ಫಲಾನುಭವಿಗಳಿಗೆ 1 ಮತ್ತು 2ನೇ ಕಂತುಗಳ ವಿತರಣೆಗೆ ಪ್ರಧಾನ ಮಂತ್ರಿ ಚಾಲನೆ ನೀಡಲಿದ್ದಾರೆ.

ಬೆಂಗಳೂರಿನಲ್ಲಿ ಪ್ರಧಾನಿ

ಪ್ರಧಾನ ಮಂತ್ರಿ ಅವರು ಬೆಂಗಳೂರಿನಲ್ಲಿ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ(ಬಿಐಇಟಿಸಿ) ಕ್ಯಾಂಪಸ್ ಉದ್ಘಾಟಿಸಲಿದ್ದಾರೆ. 1,600 ಕೋಟಿ ರೂ. ಬಂಡವಾಳದಲ್ಲಿ 43 ಎಕರೆ ಕ್ಯಾಂಪಸ್ ನಲ್ಲಿ ಇದನ್ನು ನಿರ್ಮಿಸಲಾಗಿದೆ. ಅಮೆರಿಕ ಹೊರಗೆ ಬೋಯಿಂಗ್‌ ಸಂಸ್ಥೆ ಮಾಡಿರುವ ಅತಿದೊಡ್ಡ ಹೂಡಿಕೆ ಇದಾಗಿದೆ. ಭಾರತದಲ್ಲಿನ ಬೋಯಿಂಗ್‌ನ ಹೊಸ ಕ್ಯಾಂಪಸ್ ಭಾರತದಲ್ಲಿ ರೋಮಾಂಚಕ ಸ್ಟಾರ್ಟಪ್, ಖಾಸಗಿ ಮತ್ತು ಸರ್ಕಾರಿ ಪರಿಸರ ವ್ಯವಸ್ಥೆಯೊಂದಿಗೆ ಪಾಲುದಾರಿಕೆಗೆ ಆಧಾರಸ್ತಂಭವಾಗಲಿದೆ. ಜಾಗತಿಕ ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮಕ್ಕಾಗಿ ಹೊಸ ಪೀಳಿಗೆಯ ಉತ್ಪನ್ನಗಳು ಮತ್ತು ಸೇವೆಗಳನ್ನು ಅಭಿವೃದ್ಧಿಪಡಿಸಲು ಈ ಸಂಸ್ಥೆ ಸಹಾಯ ಮಾಡಲಿದೆ.

ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರು ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದು ದೇಶದ ಬೆಳೆಯುತ್ತಿರುವ ವಾಯುಯಾನ ಕ್ಷೇತ್ರಕ್ಕೆ ಭಾರತದಾದ್ಯಂತ ಹೆಚ್ಚಿನ ಹೆಣ್ಣು ಮಕ್ಕಳ ಪ್ರವೇಶ ಬೆಂಬಲಿಸುವ ಅಥವಾ ಅವಕಾಶ ಕಲ್ಪಿಸುವ ಗುರಿ ಹೊಂದಿದೆ. ಈ ಕಾರ್ಯಕ್ರಮವು ಭಾರತದಾದ್ಯಂತದ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (STEM) ಕ್ಷೇತ್ರಗಳಲ್ಲಿ ನಿರ್ಣಾಯಕ ಕೌಶಲ್ಯಗಳನ್ನು ಕಲಿಯಲು ಮತ್ತು ವಾಯುಯಾನ ವಲಯದಲ್ಲಿ ಉದ್ಯೋಗಗಳಿಗೆ ತರಬೇತಿ ನೀಡಲು ವಿಫುಲ ಅವಕಾಶಗಳನ್ನು ಒದಗಿಸುತ್ತದೆ. ಯುವತಿಯರಿಗಾಗಿ, ಪ್ರೋಗ್ರಾಂ 150 ಯೋಜಿತ ಸ್ಥಳಗಳಲ್ಲಿ STEM ಪ್ರಯೋಗಾಲಯಗಳನ್ನು ಸ್ಥಾಪಿಸಲಿದೆ. ಇದು STEM ವೃತ್ತಿಜೀವನದಲ್ಲಿ ಆಸಕ್ತಿ ಕೆರಳಿಸಲು ಮತ್ತು ಹುಟ್ಟುಹಾಕಲು ಸಹಾಯ ಮಾಡುತ್ತದೆ. ಈ ಕಾರ್ಯಕ್ರಮವು ಪೈಲಟ್ ಆಗಲು ತರಬೇತಿ ಪಡೆಯುವ ಮಹಿಳೆಯರಿಗೆ ವಿದ್ಯಾರ್ಥಿವೇತನವನ್ನು ಸಹ ನೀಡುತ್ತದೆ.

ಖೇಲೋ ಇಂಡಿಯಾ ಯೂತ್ ಗೇಮ್ಸ್-2023ರಲ್ಲಿ ಪ್ರಧಾನ ಮಂತ್ರಿ

ಕೆಳಮಟ್ಟದಲ್ಲಿ ಕ್ರೀಡಾ ಅಭಿವೃದ್ಧಿ ಉತ್ತೇಜಿಸಲು ಮತ್ತು ಉದಯೋನ್ಮುಖ ಕ್ರೀಡಾ ಪ್ರತಿಭೆಗಳನ್ನು ಪೋಷಿಸುವ ಪ್ರಧಾನ ಮಂತ್ರಿ ಅವರ ಅಚಲ ಬದ್ಧತೆಯ ಪರಿಣಾಮವಾಗಿ ಖೇಲೋ ಇಂಡಿಯಾ ಯೂತ್ ಗೇಮ್ಸ್ ಪ್ರಾರಂಭವಾಯಿತು. ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆಯಲಿರುವ 6ನೇ ಖೇಲೋ ಇಂಡಿಯಾ ಯೂತ್ ಗೇಮ್ಸ್ 2023ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ದಕ್ಷಿಣ ಭಾರತದಲ್ಲಿ ಖೇಲೋ ಇಂಡಿಯಾ ಯೂತ್ ಗೇಮ್ಸ್ ನಡೆಯುತ್ತಿರುವುದು ಇದೇ ಮೊದಲು. 2024 ಜನವರಿ 19ರಿಂದ 31ರ ವರೆಗೆ ತಮಿಳುನಾಡಿನ 4 ನಗರಗಳಾದ ಚೆನ್ನೈ, ಮಧುರೈ, ತಿರುಚ್ಚಿ ಮತ್ತು ಕೊಯಮತ್ತೂರುಗಳಲ್ಲಿ ಕ್ರೀಡಾಕೂಟಗಳು ನಡೆಯಲಿವೆ.

ಈ ಕ್ರೀಡಾಕೂಟದ ಶುಭ ಚಿಹ್ನೆ ಅಥವಾ ಸಂಕೇತವೇ ವೀರ ಮಂಗೈ. ವೀರ ಮಂಗೈ ಎಂದು ಪ್ರೀತಿಯಿಂದ ಕರೆಯಲಾಗುವ ರಾಣಿ ವೇಲು ನಾಚಿಯಾರ್ ಅವರು ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಯುದ್ಧ ಮಾಡಿದ ಭಾರತೀಯ ಧೀರ ರಾಣಿ. ಮಸ್ಕಾಟ್ ಎಂಬ ಪದವು ಭಾರತೀಯ ಮಹಿಳೆಯರ ಶೌರ್ಯ ಮತ್ತು ಚೈತನ್ಯವನ್ನು ಸಂಕೇತಿಸುತ್ತದೆ. ಮಹಿಳಾ ಶಕ್ತಿಯನ್ನು ಸಾಕಾರಗೊಳಿಸುತ್ತದೆ. ಕ್ರೀಡಾಕೂಟದ ಲೋಗೊವು ಕವಿ ತಿರುವಳ್ಳುವರ್ ಆಕೃತಿಯನ್ನು ಒಳಗೊಂಡಿದೆ.

13 ದಿನಗಳ ಕಾಲ 15 ವಿವಿಧ ಸ್ಥಳಗಳಲ್ಲಿ ನಡೆಯುವ ಖೇಲೋ ಇಂಡಿಯಾ ಯೂತ್ ಗೇಮ್ಸ್‌ನ 26 ಕ್ರೀಡಾ ವಿಭಾಗಗಳಲ್ಲಿ 275ಕ್ಕೂ ಹೆಚ್ಚು ಸ್ಪರ್ಧೆಗಳು ಮತ್ತು 1 ಡೆಮೊ ಕ್ರೀಡೆ ಇರುವ ಈ ಆವೃತ್ತಿಯಲ್ಲಿ 5,600ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. 26 ಕ್ರೀಡಾ ವಿಭಾಗಗಳು ಅಂದರೆ, ಸಾಮಾನ್ಯ(ವಾಡಿಕೆಯ) ಕ್ರೀಡೆಗಳಾದ ಫುಟ್‌ಬಾಲ್, ವಾಲಿಬಾಲ್, ಬ್ಯಾಡ್ಮಿಂಟನ್ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಕಲರಿಪಯಟ್ಟು, ಗಟ್ಕಾ, ತಂಗ್ ತಾ, ಕಬಡ್ಡಿ ಮತ್ತು ಯೋಗಾಸನಗಳ ವೈವಿಧ್ಯಮಯ ಮಿಶ್ರಣವಾಗಿದೆ. ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಸಿಲಂಬಮ್ ಅನ್ನು ಖೇಲೋ ಇಂಡಿಯಾ ಯೂತ್ ಗೇಮ್ಸ್ ಇತಿಹಾಸದಲ್ಲಿ ಮೊದಲ ಬಾರಿಗೆ ಡೆಮೊ ಕ್ರೀಡೆಯಾಗಿ ಪರಿಚಯಿಸಲಾಗುತ್ತಿದೆ.

ಉದ್ಘಾಟನಾ ಸಮಾರಂಭದಲ್ಲಿ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ಪ್ರಸಾರ ಕ್ಷೇತ್ರಕ್ಕೆ ಸಂಬಂಧಿಸಿದ ಯೋಜನೆಗಳಿಗೆ ಪ್ರಧಾನಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಡಿಡಿ ಪೊಧಿಗೈ ವಾಹಿನಿಯನ್ನು ಇದೀಗ ಡಿಡಿ ತಮಿಳು ಎಂದು ಪರಿಷ್ಕರಿಸಲಾಗಿದ್ದು, ಈ ಹೊಸ ವಾಹಿನಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಜತೆಗೆ,  8 ರಾಜ್ಯಗಳಲ್ಲಿ 12 ಆಕಾಶವಾಣಿ ಎಫ್ಎಂ ಯೋಜನೆಗಳು ಹಾಗೂ ಜಮ್ಮು-ಕಾಶ್ಮೀರದಲ್ಲಿ 4 ಡಿಡಿ ಟ್ರಾನ್ಸ್‌ಮಿಟರ್‌ಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಜತೆಗೆ, 12 ರಾಜ್ಯಗಳಲ್ಲಿ 26 ಹೊಸ ಎಫ್‌ಎಂ ಟ್ರಾನ್ಸ್‌ಮಿಟರ್ ಯೋಜನೆಗಳಿಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
PLI, Make in India schemes attracting foreign investors to India: CII

Media Coverage

PLI, Make in India schemes attracting foreign investors to India: CII
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ನವೆಂಬರ್ 2024
November 21, 2024

PM Modi's International Accolades: A Reflection of India's Growing Influence on the World Stage