Quoteರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಲಿದ್ದಾರೆ
Quoteಅಮರಾವತಿಯಲ್ಲಿ ಪ್ರಧಾನಮಂತ್ರಿ ಮಿತ್ರಾ ಪಾರ್ಕ್ ಶಂಕುಸ್ಥಾಪನೆ
Quoteಪ್ರಧಾನಮಂತ್ರಿ ಅವರು ಆಚಾರ್ಯ ಚಾಣಕ್ಯ ಕೌಶಲ್ಯ ವಿಕಾಸ ಯೋಜನೆ ಮತ್ತು ಪುಣ್ಯಶ್ಲೋಕ ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸ್ಟಾರ್ಟ್ ಅಪ್ ಯೋಜನೆಯನ್ನು ಉದ್ಘಾಟಿಸಲಿದ್ದಾರೆ

  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 20 ರಂದು ಮಹಾರಾಷ್ಟ್ರದ ವಾರ್ಧಾಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ, ಅವರು ಪಿಎಂ ವಿಶ್ವಕರ್ಮ ಅಡಿಯಲ್ಲಿ ಒಂದು ವರ್ಷದ ಪ್ರಗತಿಯನ್ನು ಆಚರಿಸುತ್ತಿರುವ ರಾಷ್ಟ್ರೀಯ 'ಪಿಎಂ ವಿಶ್ವಕರ್ಮ' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಸಮಯದಲ್ಲಿ, ಪ್ರಧಾನಮಂತ್ರಿಯವರು ಪಿಎಂ ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸಾಲಗಳನ್ನು ಬಿಡುಗಡೆ ಮಾಡಲಿದ್ದಾರೆ. ಈ ಯೋಜನೆಯಡಿ ಕರಕುಶಲ ಕಲಾವಿದರಿಗೆ ನೀಡಲಾಗುವ  ಬೆಂಬಲವನ್ನು ಸಂಕೇತಿಸುವ ರೀತಿಯಲ್ಲಿ, ಅವರು 18 ಟ್ರೇಡ್ ಗಳ ಅಡಿಯಲ್ಲಿ 18 ಫಲಾನುಭವಿಗಳಿಗೆ ಪಿಎಂ ವಿಶ್ವಕರ್ಮ ಅಡಿಯಲ್ಲಿ ಸಾಲವನ್ನು ವಿತರಿಸಲಿದ್ದಾರೆ. ಅವರ ಪರಂಪರೆ ಮತ್ತು ಸಮಾಜಕ್ಕೆ ನೀಡಿದ ಶಾಶ್ವತ ಕೊಡುಗೆಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ, ಪಿಎಂ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಒಂದು ವರ್ಷದ ಪ್ರಗತಿಯನ್ನು ಗುರುತಿಸಲು ಸ್ಮರಣೀಯ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದ್ದಾರೆ.

ಪ್ರಧಾನಮಂತ್ರಿಯವರು ಮಹಾರಾಷ್ಟ್ರದ ಅಮರಾವತಿಯಲ್ಲಿ ಪಿಎಂ ಮೆಗಾ ಇಂಟಿಗ್ರೇಟೆಡ್ ಟೆಕ್ಸ್ ಟೈಲ್ ರೀಜನ್ಸ್ ಅಂಡ್ ಅಪ್ಯಾರೆಲ್ (ಪಿಎಂ ಮಿತ್ರ) ಪಾರ್ಕ್ ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 1000 ಎಕರೆ ವಿಸ್ತೀರ್ಣದ ಈ ಪಾರ್ಕ್ ಅನ್ನು ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ (ಎಂಐಡಿಸಿ) ರಾಜ್ಯ ಅನುಷ್ಠಾನ ಸಂಸ್ಥೆಯಾಗಿ ಅಭಿವೃದ್ಧಿಪಡಿಸುತ್ತಿದೆ. ಜವಳಿ ಉದ್ಯಮಕ್ಕಾಗಿ 7 ಪಿಎಂ ಮಿತ್ರ ಪಾರ್ಕ್ ಗಳನ್ನು ಸ್ಥಾಪಿಸಲು ಭಾರತ ಸರ್ಕಾರ ಅನುಮೋದನೆ ನೀಡಿತ್ತು. ಪಿಎಂ ಮಿತ್ರ ಪಾರ್ಕ್ ಗಳು ಭಾರತವನ್ನು ಜಾಗತಿಕ ಜವಳಿ ತಯಾರಿಕೆ ಮತ್ತು ರಫ್ತು ಕೇಂದ್ರವನ್ನಾಗಿ ಮಾಡುವ ದೃಷ್ಟಿಯನ್ನು ಸಾಕಾರಗೊಳಿಸುವಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಇದು ವಿದೇಶಿ ನೇರ ಹೂಡಿಕೆ (FDI) ಸೇರಿದಂತೆ ದೊಡ್ಡ ಪ್ರಮಾಣದ ಹೂಡಿಕೆಯನ್ನು ಆಕರ್ಷಿಸುವ ವಿಶ್ವದರ್ಜೆಯ ಕೈಗಾರಿಕಾ ಮೂಲಸೌಕರ್ಯವನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ. ಅಲ್ಲದೆ ಈ ವಲಯದಲ್ಲಿ ಹೊಸತನ ಹಾಗೂ ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ಪ್ರಧಾನಮಂತ್ರಿಯವರು ಮಹಾರಾಷ್ಟ್ರ ಸರ್ಕಾರದ "ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ ಕೇಂದ್ರ" ಯೋಜನೆಗೆ ಚಾಲನೆ ನೀಡಲಿದ್ದಾರೆ. 15 ರಿಂದ 45 ವರ್ಷದೊಳಗಿನ ಯುವಕರಿಗೆ ತರಬೇತಿ ನೀಡಲು ರಾಜ್ಯದಾದ್ಯಂತ ಪ್ರಸಿದ್ಧ ಕಾಲೇಜುಗಳಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದರಿಂದ ಅವರು ಸ್ವಾವಲಂಬಿಗಳಾಗಲು ಮತ್ತು ವಿವಿಧ ಉದ್ಯೋಗಾವಕಾಶಗಳನ್ನು ಪಡೆಯಬಹುದು. ರಾಜ್ಯಾದ್ಯಂತ ಸುಮಾರು 1,50,000 ಯುವಕರು ಪ್ರತಿ ವರ್ಷ ಉಚಿತ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಪಡೆಯುತ್ತಾರೆ.

ಪ್ರಧಾನಮಂತ್ರಿಯವರು "ಪುಣ್ಯಶ್ಲೋಕ ಅಹಲ್ಯಾ ದೇವಿ ಹೋಳ್ಕರ್ ಮಹಿಳಾ ಸ್ಟಾರ್ಟ್ಅಪ್ ಯೋಜನೆ " ಯನ್ನು ಉದ್ಘಾಟಿಸಲಿದ್ದಾರೆ. ಈ ಯೋಜನೆಯಡಿಯಲ್ಲಿ, ಮಹಾರಾಷ್ಟ್ರದಲ್ಲಿ ಮಹಿಳಾ ನೇತೃತ್ವದ ಸ್ಟಾರ್ಟ್ಅಪ್ ಗಳಿಗೆ ಆರಂಭಿಕ ಹಂತದಲ್ಲಿ ನೆರವು ನೀಡಲಾಗುತ್ತದೆ. ಯೋಜನೆಯಡಿ 25 ಲಕ್ಷದವರೆಗೆ ಆರ್ಥಿಕ ನೆರವು ನೀಡಲಾಗುವುದು. ಸರ್ಕಾರವು ನಿರ್ದಿಷ್ಟಪಡಿಸಿದಂತೆ  ಈ ಯೋಜನೆಯಡಿಯಲ್ಲಿ ಒಟ್ಟು ನಿಬಂಧನೆಗಳ 25 ಪ್ರತಿಶತವನ್ನು ಹಿಂದುಳಿದ ವರ್ಗಗಳ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳ ಮಹಿಳೆಯರಿಗೆ ಮೀಸಲಿಡಲಾಗುತ್ತದೆ. ಇದು ಮಹಿಳಾ ನೇತೃತ್ವದ ಸ್ಟಾರ್ಟ್ಅಪ್ ಗಳು ಸ್ವಾವಲಂಬಿ ಮತ್ತು ಸ್ವತಂತ್ರವಾಗಲು ಸಹಾಯ ಮಾಡುತ್ತದೆ.

 

  • Yogendra Nath Pandey Lucknow Uttar vidhansabha November 11, 2024

    नमो नमो
  • ram Sagar pandey November 07, 2024

    🌹🙏🏻🌹जय श्रीराम🙏💐🌹जय माता दी 🚩🙏🙏🌹🌹🙏🙏🌹🌹🌹🌹🙏🙏🌹🌹🌹🌹🙏🙏🌹🌹🌹🌹🙏🙏🌹🌹
  • Dr Swapna Verma November 03, 2024

    jay shree Krishna
  • Chandrabhushan Mishra Sonbhadra November 02, 2024

    k
  • Chandrabhushan Mishra Sonbhadra November 02, 2024

    j
  • Avdhesh Saraswat November 01, 2024

    HAR BAAR MODI SARKAR
  • रामभाऊ झांबरे October 23, 2024

    Jai ho
  • Raja Gupta Preetam October 19, 2024

    जय श्री राम
  • Harsh Ajmera October 14, 2024

    Jai ho
  • B Pavan Kumar October 12, 2024

    great 👍
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Namo Drone Didi, Kisan Drones & More: How India Is Changing The Agri-Tech Game

Media Coverage

Namo Drone Didi, Kisan Drones & More: How India Is Changing The Agri-Tech Game
NM on the go

Nm on the go

Always be the first to hear from the PM. Get the App Now!
...
We remain committed to deepening the unique and historical partnership between India and Bhutan: Prime Minister
February 21, 2025

Appreciating the address of Prime Minister of Bhutan, H.E. Tshering Tobgay at SOUL Leadership Conclave in New Delhi, Shri Modi said that we remain committed to deepening the unique and historical partnership between India and Bhutan.

The Prime Minister posted on X;

“Pleasure to once again meet my friend PM Tshering Tobgay. Appreciate his address at the Leadership Conclave @LeadWithSOUL. We remain committed to deepening the unique and historical partnership between India and Bhutan.

@tsheringtobgay”