ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಘನತೆವೆತ್ತ ದೊರೆ ಮೂರನೇ ಚಾರ್ಲ್ಸ್ ಅವರಿಗೆ ಶೀಘ್ರ ಚೇತರಿಕೆ ಮತ್ತು ಉತ್ತಮ ಆರೋಗ್ಯಕ್ಕಾಗಿ ತಮ್ಮ ಮತ್ತು ಭಾರತದ ಜನತೆಯ ಪರವಾಗಿ ಶುಭ ಕೋರಿದ್ದಾರೆ.
ಘನತೆವೆತ್ತ ದೊರೆ ಮೂರನೇ ಚಾರ್ಲ್ಸ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಸುದ್ದಿಯನ್ನು ತಿಳಿಸುವ ರಾಜಮನೆತನದ ಪೋಸ್ಟ್ ಗೆ ಉತ್ತರವಾಗಿ, ಪ್ರಧಾನಮಂತ್ರಿಯವರು Xನಲ್ಲಿ:
"ಘನತೆವೆತ್ತ ದೊರೆ ಮೂರನೇ ಚಾರ್ಲ್ಸ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಮತ್ತು ಉತ್ತಮ ಆರೋಗ್ಯವನ್ನು ಪಡೆಯಲಿ ಎಂದು ನಾನು, ನನ್ನ ಮತ್ತು ನಮ್ಮ ಭಾರತದ ಜನತೆಯ ಪರವಾಗಿ ಶುಭ ಹಾರೈಸುತ್ತೇನೆ" ಎಂದು ಪೋಸ್ಟ್ ಮಾಡಿದ್ದಾರೆ.
I join the people of India in wishing speedy recovery and good health to His Majesty King Charles III. https://t.co/86mKg9lE1q
— Narendra Modi (@narendramodi) February 6, 2024