ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ G20 ಶೃಂಗಸಭೆಯ ನೇಪಥ್ಯದಲ್ಲಿ ಪೋರ್ಚುಗೀಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲೂಯಿಸ್ ಮಾಂಟೆನೆಗ್ರೊ ಅವರನ್ನು ಭೇಟಿ ಮಾಡಿದ್ದರು. ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ. 2024ರ ಏಪ್ರಿಲ್‌ ನಲ್ಲಿ  ಪ್ರಧಾನಮಂತ್ರಿಯಾಗಿ ಮಾಂಟೆನೆಗ್ರೊ ಅಧಿಕಾರ ಸ್ವೀಕರಿಸಿದ್ದಾಗ ಪ್ರಧಾನಿ ನರೇಂದ್ರ ಮೋದಿ, ಅವರನ್ನು ಅಭಿನಂದಿಸಿದ್ದರು ಮತ್ತು ಭಾರತ ಮತ್ತು ಪೋರ್ಚುಗಲ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಒಗ್ಗೂಡಿ ಕೆಲಸ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಗೆ ಪ್ರಧಾನಿ ಮೊಂಟೆನೆಗ್ರೊ ಅವರು ಅಭಿನಂದನೆ ಸಲ್ಲಿಸಿದ್ದರು.

ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಜನರೊಂದಿಗೆ ಜನರ ಸಂಬಂಧಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಕುರಿತು ನಾಯಕರು ಚರ್ಚಿಸಿದರು. ಐಟಿ ಮತ್ತು ಡಿಜಿಟಲ್ ತಂತ್ರಜ್ಞಾನಗಳು, ನವೀಕರಿಸಬಹುದಾದ ಇಂಧನ, ಸ್ಟಾರ್ಟ್‌ಅಪ್‌ಗಳು ಮತ್ತು ನಾವೀನ್ಯತೆ ಮತ್ತು ವೃತ್ತಿಪರರು ಮತ್ತು ನುರಿತ ಕೆಲಸಗಾರರ ಚಲನಶೀಲತೆಯಂತಹ ಹೊಸ ಮತ್ತು ಉದಯೋನ್ಮುಖ ಕ್ಷೇತ್ರಗಳಲ್ಲಿ ಸಹಯೋಗಕ್ಕಾಗಿ ಬೆಳೆಯುತ್ತಿರುವ ಸಾಮರ್ಥ್ಯವನ್ನು ಅವರು ಒತ್ತಿಹೇಳಿದರು. ಉಭಯ ನಾಯಕರು ಪ್ರಾದೇಶಿಕ ಬೆಳವಣಿಗೆಗಳು ಮತ್ತು ಭಾರತ-ಇಯು ಸಂಬಂಧಗಳು ಸೇರಿದಂತೆ ಪರಸ್ಪರ ಹಿತಾಸಕ್ತಿಯ ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಪ್ರಾದೇಶಿಕ ಮತ್ತು ಬಹುಪಕ್ಷೀಯ ವೇದಿಕೆಗಳಲ್ಲಿ ಅಸ್ತಿತ್ವದಲ್ಲಿರುವ ನಿಕಟ ಸಹಕಾರವನ್ನು ಮುಂದುವರಿಸಲು ಅವರು ಒಪ್ಪಿಕೊಂಡರು.

2025 ಭಾರತ ಮತ್ತು ಪೋರ್ಚುಗಲ್ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 50ನೇ ವಾರ್ಷಿಕೋತ್ಸವವನ್ನು ಸೂಚಿಸುತ್ತದೆ ಎಂದು ನಾಯಕರು ಗಮನಿಸಿದರು. ಅವರು ಜಂಟಿಯಾಗಿ ಈ ಸಂದರ್ಭವನ್ನು ಸೂಕ್ತವಾದ ರೀತಿಯಲ್ಲಿ ಆಚರಿಸಲು ಒಪ್ಪಿಕೊಂಡರು. ಇಬ್ಬರೂ ನಾಯಕರು ಪರಸ್ಪರ ಸಂಪರ್ಕದಲ್ಲಿರಲು ಒಪ್ಪಿಕೊಂಡರು.

 

 

  • Debojyoti Bauri July 02, 2025

    👍
  • Bhavesh January 28, 2025

    🚩🇮🇳
  • Vivek Kumar Gupta January 10, 2025

    नमो ..🙏🙏🙏🙏🙏
  • Vivek Kumar Gupta January 10, 2025

    नमो .....................🙏🙏🙏🙏🙏
  • JYOTI KUMAR SINGH December 08, 2024

    🙏
  • Preetam Gupta Raja December 08, 2024

    जय श्री राम
  • parveen saini December 06, 2024

    Jai ho
  • Chandrabhushan Mishra Sonbhadra December 05, 2024

    🕉️🕉️
  • Chandrabhushan Mishra Sonbhadra December 05, 2024

    🕉️
  • கார்த்திக் December 04, 2024

    🌺ஜெய் ஸ்ரீ ராம்🌺जय श्री राम🌺જય શ્રી રામ🌺 🌺ಜೈ ಶ್ರೀ ರಾಮ್🌺ଜୟ ଶ୍ରୀ ରାମ🌺Jai Shri Ram 🌺🌺 🌺জয় শ্ৰী ৰাম🌺ജയ് ശ്രീറാം 🌺 జై శ్రీ రామ్ 🌺🌹
Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
How NEP facilitated a UK-India partnership

Media Coverage

How NEP facilitated a UK-India partnership
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಜುಲೈ 2025
July 29, 2025

Aatmanirbhar Bharat Transforming India Under Modi’s Vision