ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಪ್ರಧಾನಿ ಗೌರವಾನ್ವಿತ ಶ್ರೀ ಪ್ರವಿಂದ್ ಕೆ. ಜುಗ್ನೌತ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು. ಪ್ರಧಾನಮಂತ್ರಿ ಜುಗ್ನೌತ್ ಅವರು, ಪ್ರಧಾನಮಂತ್ರಿಯಾಗಿ ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದರು ಮತ್ತು ಈ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ವಿಶ್ವದ ಅತಿದೊಡ್ಡ ಮತದಾರರು ಇಟ್ಟಿರುವ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಒತ್ತಿ ಹೇಳಿದರು. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮತ್ತು ಸ್ಪೂರ್ತಿದಾಯಕವಾಗಿ ಕಾರ್ಯಗತಗೊಳಿಸಿದ್ದಕ್ಕಾಗಿ ಪ್ರಧಾನಿ ಜುಗ್ನೌತ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಜುಗ್ನೌತ್ ಅವರಿಗೆ ಧನ್ಯವಾದ ಅರ್ಪಿಸಿದರು ಮತ್ತು ಭಾರತ ಮತ್ತು ಮಾರಿಷಸ್ ನಡುವಿನ ವಿಶೇಷ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ದೀರ್ಘಕಾಲೀನ ದ್ವಿಪಕ್ಷೀಯ ಸಹಯೋಗವನ್ನು ಆಳಗೊಳಿಸಲು ಮತ್ತು ಉಭಯ ದೇಶಗಳ ನಡುವಿನ ಬಲವಾದ ಜನರ ನಡುವಿನ ಸಂಬಂಧಗಳನ್ನು ಗಟ್ಟಿಗೊಳಿಸಲು ತಮ್ಮ ನಿರಂತರ ಬದ್ಧತೆಯನ್ನು ಪುನರುಚ್ಚರಿಸಿದರು.
Thank you, Prime Minister @KumarJugnauth, for your call and heartfelt wishes. I look forward to continued collaboration between our two countries to further strengthen the special India-Mauritius relationship in my third term.
— Narendra Modi (@narendramodi) June 5, 2024