ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನವಾದ ಇಂದು ಗುಜರಾತ್ ನ ಕೆವಾಡಿಯಾದಲ್ಲಿರುವ ಜಗದ್ವಿಖ್ಯಾತ ಏಕತಾಮೂರ್ತಿ ಸ್ಥಳದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರಿಗೆ ಪುಷ್ಪನಮನ ಸಲ್ಲಿಸಿದರು.
ಸರ್ದಾರ್ ಪಟೇಲ್ ಅವರ ಜನ್ಮದಿನವನ್ನು ದೇಶಾದ್ಯಂತ ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಯಿತು. ಏಕ ಭಾರತ ಶ್ರೇಷ್ಠ ಭಾರತ ಗುರಿ ಸಾಧನೆ ಮಾಡಿದ ಸ್ಫೂರ್ತಿ ಹಿನ್ನೆಲೆಯಲ್ಲಿ ದೇಶಾದ್ಯಂತ ಏಕತಾ ಓಟ ಆಯೋಜಿಸಲಾಗಿತ್ತು.
ಪ್ರಧಾನಮಂತ್ರಿ ಅವರು, ‘ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜಯಂತಿ ಅಂಗವಾಗಿ ಅವರಿಗೆ ನಮನ ಸಲ್ಲಿಸುತ್ತೇನೆ. ರಾಷ್ಟ್ರಕ್ಕೆ ಪಟೇಲ್ ಅವರ ಕೊಡುಗೆ ಸ್ಮರಣೀಯ’ ಎಂದರು. ಅಲ್ಲದೆ ಪ್ರಧಾನಮಂತ್ರಿ ಅವರು ಕೆವಾಡಿಯಾದಲ್ಲಿ ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞಾವಿಧಿ ಬೋಧಿಸಿದರು.