ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ದೂರವಾಣಿ ಕರೆಯನ್ನು ಸ್ವೀಕರಿಸಿದರು.
ಇಬ್ಬರೂ ನಾಯಕರು, ಕಳೆದ ಕೆಲವು ವರ್ಷಗಳಲ್ಲಿ ಭಾರತ ಮತ್ತು ಅಮೆರಿಕ ನಡುವಿನ ಬಾಂಧವ್ಯ ಮತ್ತು ಸಹಕಾರದಲ್ಲಿ ಆಗಿರುವ ಗಣನೀಯ ಪ್ರಗತಿಯನ್ನು ತೃಪ್ತಿದಾಯಕವಾಗಿ ಪರಾಮರ್ಶಿಸಿದರು.
ಭಾರತ ಮತ್ತು ಅಮೆರಿಕಾ ನಡುವೆ ಕಾರ್ಯತಂತ್ರಾತ್ಮಕ ಪಾಲುದಾರಿಕೆಯನ್ನು ಬಲಪಡಿಸಲು ನೀಡಿದ ಬೆಂಬಲ ಮತ್ತು ಕೊಡುಗೆಗಾಗಿ ಬರಾಕ್ ಒಬಾಮಾ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು.
ಬರಾಕ್ ಒಬಾಮಾ ಅವರ ಮುಂದಿನ ಪ್ರಯತ್ನಗಳಿಗೆ ಪ್ರಧಾನಮಂತ್ರಿಯವರು ತಮ್ಮ ಶುಭ ಹಾರೈಕೆಗಳನ್ನು ತಿಳಿಸಿದರು.