ಗುಜರಾತ್‌ನ ಕೆವಾಡಿಯಾದಲ್ಲಿ ರಕ್ಷಣಾ ಸಚಿವಾಲಯ ಆಯೋಜಿಸಿದ್ದ ಕಮಾಂಡರ್ ಗಳ ಸಂಯೋಜಿತ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಿದರು.

ವಾರ್ಷಿಕ ಸಮ್ಮೇಳನ ಕುರಿತು ನಡೆದ ಚರ್ಚೆಯ ವಿವರಗಳನ್ನು ರಕ್ಷಣಾ ಸಚಿವಾಲಯದ ಸಿಬ್ಬಂದಿ ವಿಭಾಗದ ಮುಖ್ಯಸ್ಥರು ಪ್ರಧಾನಮಂತ್ರಿ ಅವರಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಮ್ಮೇಳನದ ಚೌಕಟ್ಟು ಮತ್ತು ಕಾರ್ಯಸೂಚಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವರ್ಷದ ಸಮ್ಮೇಳನದಲ್ಲಿ ನಿರ್ದಿಷ್ಟವಾಗಿ ಕಿರಿಯ ನಿಯೋಜಿತ ಮತ್ತು ನಿಯೋಜಿತವಲ್ಲದ ಅಧಿಕಾರಿಗಳು ಪಾಲ್ಗೊಳ್ಳುವಂತೆ ಮಾಡಿರುವ ಕ್ರಮವನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು.

ರಾಷ್ಟ್ರೀಯ ರಕ್ಷಣಾ ವ್ಯವಸ್ಥೆಯ ಪರಮೋಚ್ಚ ನಾಗರಿಕ ಮತ್ತು ಮಿಲಿಟರಿ ನಾಯಕತ್ವವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಸಶಸ್ತ್ರ ಪಡೆಗಳು ಉತ್ತರ ಗಡಿ ಭಾಗದಲ್ಲಿನ ಪರಿಸ್ಥಿತಿಯ ಸವಾಲುಗಳನ್ನು ಎದುರಿಸಿದ, ಕೋವಿಡ್ ಸಾಂಕ್ರಾಮಿಕ ಮತ್ತು ಕಳೆದ ಹಲವು ವರ್ಷಗಳಿಂದ ಸಮರ್ಪಣಾ ಭಾವದಿಂದ ಕಾರ್ಯನಿರ್ವಹಿಸುತ್ತಿರುವುದನ್ನು ಶ್ಲಾಘಿಸಿದರು.

ರಾಷ್ಟ್ರೀಯ ಭದ್ರತಾ ವ್ಯವಸ್ಥೆಯಲ್ಲಿ ದೇಶೀಯ ಪರಿಕರಗಳನ್ನು ಹೆಚ್ಚಿಸುತ್ತಿರುವ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ ಅವರು, ಇವು ಕೇವಲ ಪರಿಕರಗಳು ಮತ್ತು ಅಸ್ತ್ರಗಳಲ್ಲ, ಬದಲಿಗೆ ಇವು ಸಶಸ್ತ್ರ ಪಡೆಗಳಲ್ಲಿ ಅಭ್ಯಾಸ ಮಾಡುವ ಸಿದ್ಧಾಂತಗಳು, ಕಾರ್ಯ ವಿಧಾನಗಳು ಮತ್ತು ಪದ್ಧತಿಗಳಾಗಿವೆ ಎಂದರು.

 

ರಾಷ್ಟ್ರೀಯ ಭದ್ರತಾ ವಾಸ್ತು ಶಿಲ್ಪದಲ್ಲಿ ಸೇನೆ ಮತ್ತು ನಾಗರಿಕ ಭಾಗಗಳಲ್ಲಿ ಮಾನವ ಶಕ್ತಿಯ ನಿಯೋಜನೆಯನ್ನು ಉತ್ತಮಗೊಳಿಸುವ ಅಗತ್ಯವನ್ನು ಅವರು ಬಲವಾಗಿ ಪ್ರತಿಪಾದಿಸಿದರು. ಸೇನೆ ಮತ್ತು ನಾಗರಿಕ ಅಡೆತಡೆಗಳನ್ನು ನಿವಾರಿಸುವ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ವೇಗವನ್ನು ಹೆಚ್ಚಿಸುವ ಸಮಗ್ರ ವಿಧಾನ ಅನುಸರಿಸುವಂತೆ ಅವರು ಕರೆ ನೀಡಿದರು. ಸೇವೆಗಳ ಉಪಯುಕ್ತತೆಯನ್ನು ಅರ್ಥಮಾಡಿಕೊಂಡು ಪ್ರಸ್ತುತತೆಯನ್ನು ಮೀರಿದ ಪರಂಪರೆಯ ವ್ಯವಸ್ಥೆಗಳು ಮತ್ತು ಅಭ್ಯಾಸಗಳಿಂದ ದೂರವಿರುವಂತೆ ಅವರು ಕರೆ ನೀಡಿದರು.

 

ವೇಗವಾಗಿ ಬದಲಾಗುತ್ತಿರುವ ತಾಂತ್ರಿಕ ಭೂ ದೃಶ್ಯವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ ಅವರು, ಭಾರತೀಯ ಸೇನೆಯನ್ನು ಭವಿಷ್ಯದ ಶಕ್ತಿಯಾಗಿ ಅಭಿವೃದ್ಧಿಪಡಿಸುವ ಅಗತ್ಯವನ್ನು ಪ್ರತಿಪಾದಿಸಿದರು.

ಮುಂದಿನ ವರ್ಷ ದೇಶ 75 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದು, ದೇಶದ ಯುವ ಸಮೂಹಕ್ಕೆ ಸ್ಫೂರ್ತಿ ನೀಡುವಂತಹ ಚಟುವಟಿಕೆಗಳು ಉಪಕ್ರಮಗಳನ್ನು ಕೈಗೊಳ್ಳಲು ಈ ಸುಸಂದರ್ಭವನ್ನು ಬಳಸಿಕೊಳ್ಳುವಂತೆ ಸಶಸ್ತ್ರ ಪಡೆಗಳಿಗೆ ಪ್ರಧಾನಮಂತ್ರಿ ಅವರು ಕರೆ ನೀಡಿದರು.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Cabinet approves minimum support price for Copra for the 2025 season

Media Coverage

Cabinet approves minimum support price for Copra for the 2025 season
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಡಿಸೆಂಬರ್ 2024
December 21, 2024

Inclusive Progress: Bridging Development, Infrastructure, and Opportunity under the leadership of PM Modi