ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡವೀಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಇಬ್ರಾಹಿಂ ಮೊಹಮದ್ ಸೋಲಿಹ್ ಇಂದು ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.
ಕೋವಿಡ್ ಸಾಂಕ್ರಾಮಿಕ ವಿರುದ್ಧದ ಹೋರಾಟಕ್ಕೆ ಭಾರತ ಬೆಂಬಲ ಮತ್ತು ಸಹಕಾರ ನೀಡಿದ್ದಕ್ಕಾಗಿ ಅಧ್ಯಕ್ಷ ಸೋಲಿಹ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ಹೇಳಿದರು.
ಉಭಯ ನಾಯಕರು ಮಾಲ್ಡವೀಸ್ ನಲ್ಲಿ ಭಾರತದ ನೆರವಿನೊಂದಿಗೆ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಾಮರ್ಶಿಸಿದರು ಮತ್ತು ಕೋವಿಡ್ ಸಾಂಕ್ರಾಮಿಕದ ನಿರ್ಬಂಧದ ಹೊರತಾಗಿಯೂ ಯೋಜನೆಗಳು ತ್ವರಿತಗತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ‘ನೆರೆಹೊರೆ ಮೊದಲು’ ನೀತಿ ಹಾಗೂ ದೂರದೃಷ್ಟಿಯ ಕಡಲ ಹಂಚಿಕೊಂಡಿರುವ ಪ್ರದೇಶದ ಎಲ್ಲ ರಾಷ್ಟ್ರಗಳ ಭದ್ರತೆ ಮತ್ತು ಪ್ರಗತಿ (ಸಾಗರ್) ನೀತಿಯಲ್ಲಿ ಮಾಲ್ಡವೀಸ್ ಅತ್ಯಂತ ಪ್ರಮುಖ ಆಧಾರ ಸ್ಥಂಭವಾಗಿದೆ ಎಂದು ಉಲ್ಲೇಖಿಸಿದರು.
ವಿಶ್ವಸಂಸ್ಥೆಯ ಮಹಾಧಿವೇಶನದ ಅಧ್ಯಕ್ಷರನ್ನಾಗಿ ವಿದೇಶಾಂಗ ಸಚಿವ ಅಬ್ದುಲ್ಲಾ ಶಾಹಿದ್ ಅವರನ್ನು ಚುನಾಯಿಸಿರುವುದಕ್ಕೆ ಪ್ರಧಾನಮಂತ್ರಿ ಅವರು ಗೌರವಾನ್ವಿತ ಅಧ್ಯಕ್ಷ ಸೋಲಿಹ್ ಅವರನ್ನು ಅಭಿನಂದಿಸಿದರು.
ಉಭಯ ನಾಯಕರ ನಡುವಿನ ಈ ದೂರವಾಣಿ ಸಮಾಲೋಚನೆ ದ್ವಿಪಕ್ಷೀಯ ಸಂಬಂಧಗಳ ಒಟ್ಟಾರೆ ಸ್ಥಿತಿಗತಿ ತಿಳಿಯಲು ಮತ್ತು ಉಭಯ ದೇಶಗಳ ನಡುವೆ ನಡೆಯುತ್ತಿರುವ ಸಾಕಷ್ಟು ಸಹಕಾರಕ್ಕೆ ಮತ್ತಷ್ಟು ವೇಗ ಮತ್ತು ಮಾರ್ಗದರ್ಶನವನ್ನು ನೀಡಲು ಅವಕಾಶ ಒದಗಿಸಿತು.
Spoke with President @ibusolih of Maldives. Assured him of India's commitment to support Maldives in the fight against the COVID-19 pandemic. We also reviewed progress of bilateral development projects. Conveyed congratulations for the election of FM Shahid as UNGA President.
— Narendra Modi (@narendramodi) July 14, 2021