ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನೇಪಾಳದ ತನಾಹುನ್ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಪರಿಹಾರ ಘೋಷಿಸಿದ್ದಾರೆ. ಪಿಎಂಎನ್ಆರ್ಎಫ್ ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ., ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.
ಈ ಸಂಬಂಧ ಪ್ರಧಾನ ಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ;
"ನೇಪಾಳದ ತನಾಹುನ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ಪಿಎಂಎನ್ಆರ್ ಎಫ್ ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನ ಮಂತ್ರಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ.ಪರಿಹಾರ ಘೋಷಿಸಿದ್ದಾರೆ,’’ ಎಂದು ತಿಳಿಸಿದೆ.
The Prime Minister has announced an ex-gratia of Rs. 2 lakh from PMNRF for the next of kin of each deceased in the mishap in Tanahun district, Nepal. The injured would be given Rs. 50,000. https://t.co/qUtVrj4ipF
— PMO India (@PMOIndia) August 24, 2024