ಹರಿಯಾಣದ ಕೈತಾಲ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯವು ಇದನ್ನು ಎಕ್ಸ್ ಖಾತೆಯಲ್ಲಿ ತಿಳಿಸಿದ್ದು:
“ಹರಿಯಾಣದ ಕೈತಾಲ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತ ವಿಷಯ ಹೃದಯ ವಿದ್ರಾವಕವಾಗಿದೆ. ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನನ್ನ ಸಂತಾಪಗಳು. ದೇವರು ಅವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲು ಸಜ್ಜಾಗಿದೆ'' ಎಂದು ಪ್ರಧಾನ ಮಂತ್ರಿಗಳು ಹೇಳಿರುವುದಾಗಿ ತಿಳಿಸಿದೆ.
हरियाणा के कैथल में हुआ सड़क हादसा हृदयविदारक है। इसमें जान गंवाने वालों के शोकाकुल परिजनों के प्रति मेरी गहरी संवेदनाएं। ईश्वर उन्हें इस पीड़ा को सहने की शक्ति प्रदान करे। राज्य सरकार की देखरेख में स्थानीय प्रशासन मौके पर हरसंभव मदद में जुटा है: PM @narendramodi
— PMO India (@PMOIndia) October 12, 2024