ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿರಿಯ ಪತ್ರಕರ್ತ ಮತ್ತು ಬರಹಗಾರ ಉಮೇಶ್ ಉಪಾಧ್ಯಾಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ದೂರದರ್ಶನಕ್ಕೆ ಅಮೂಲ್ಯ ಕೊಡುಗೆ ನೀಡಿದ ಹಿರಿಯ ಪತ್ರಕರ್ತ ಮತ್ತು ಬರಹಗಾರ ಉಮೇಶ್ ಉಪಾಧ್ಯಾಯ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ನಿಧನದಿಂದ ಪತ್ರಿಕೋದ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬಕ್ಕೆ ನಾನು ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಓಂ ಶಾಂತಿ..!’’
डिजिटल मीडिया से लेकर टेलीविजन के क्षेत्र में बहुमूल्य योगदान देने वाले वरिष्ठ पत्रकार और लेखक उमेश उपाध्याय जी के निधन से अत्यंत दुख हुआ है। उनका जाना पत्रकारिता जगत के लिए एक अपूरणीय क्षति है। शोक की इस घड़ी में उनके परिजनों के प्रति मैं अपनी संवेदनाएं व्यक्त करता हूं। ओम…
— Narendra Modi (@narendramodi) September 1, 2024