ಉತ್ತರ ಪ್ರದೇಶ ರಾಜಧಾನಿ ಲಕ್ನೋದಲ್ಲಿ ಕಟ್ಟಡ ಕುಸಿದು ಮೃತಪಟ್ಟವರ ಬಗ್ಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನ ಮಂತ್ರಿ ಕಚೇರಿ (PMO) ಎಕ್ಸ್ ಪೋಸ್ಟ್ ನಲ್ಲಿ:
"ಉತ್ತರಪ್ರದೇಶದ ಲಕ್ನೋದಲ್ಲಿ ಕಟ್ಟಡ ಅವಘಡದಿಂದ ಸಂಭವಿಸಿದ ಜೀವಹಾನಿ ವಿಷಯ ಕೇಳಿ ಅತ್ಯಂತ ದುಃಖವಾಯಿತು. ತಮ್ಮ ಮನೆಯವರು, ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಸಂತಾಪಗಳು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂಪಾಯಿ ನೀಡಲಾಗುವುದು’’ ಎಂದು ಹೇಳಿದ್ದಾರೆ. PM @narendramodi
The loss of lives due to a building mishap in Lucknow, Uttar Pradesh is saddening. Prayers with those who lost their loved ones. May the injured recover soon. An ex-gratia of Rs. 2 lakh from PMNRF would be given to the next of kin of each deceased. The injured would be given Rs.…
— PMO India (@PMOIndia) September 8, 2024