ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.
2021 ರ ಡಿಸೆಂಬರ್ ನಲ್ಲಿ ಅಧ್ಯಕ್ಷ ಪುಟಿನ್ ಅವರ ಭಾರತ ಭೇಟಿಯ ಸಮಯದಲ್ಲಿ ಕೈಗೊಂಡ ನಿರ್ಧಾರಗಳ ಅನುಷ್ಠಾನವನ್ನು ಇಬ್ಬರು ನಾಯಕರೂ ಪರಾಮರ್ಶಿದರು. ನಿರ್ದಿಷ್ಟವಾಗಿ ಕೃಷಿ ಸರಕುಗಳು, ರಸಗೊಬ್ಬರಗಳು ಮತ್ತು ಔಷಧೀಯ ಉತ್ಪನ್ನಗಳಿಗೆ ಸಂಬಂಧಿಸಿ ದ್ವಿಪಕ್ಷೀಯ ವ್ಯಾಪಾರವನ್ನು ಹೇಗೆ ಮತ್ತಷ್ಟು ಉತ್ತೇಜಿಸಬಹುದು ಎಂಬುದರ ಬಗ್ಗೆ ಅವರು ವಿಚಾರ ವಿನಿಮಯ ಮಾಡಿಕೊಂಡರು.
ಅಂತಾರಾಷ್ಟ್ರೀಯ ಇಂಧನ ಮತ್ತು ಆಹಾರ ಮಾರುಕಟ್ಟೆಗಳ ಸ್ಥಿತಿ-ಗತಿ ಸಹಿತ ಜಾಗತಿಕ ಸಮಸ್ಯೆಗಳ ಬಗ್ಗೆಯೂ ನಾಯಕರು ಚರ್ಚಿಸಿದರು.
ಉಕ್ರೇನ್ ನಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಪ್ರಧಾನ ಮಂತ್ರಿ ಅವರು ಪರಸ್ಪರ ಮಾತುಕತೆ ಮತ್ತು ರಾಜತಾಂತ್ರಿಕತೆಯ ಪರವಾಗಿ ಭಾರತದ ದೀರ್ಘಕಾಲದ ನಿಲುವನ್ನು ಪುನರುಚ್ಚರಿಸಿದರು.
ಜಾಗತಿಕ ಮತ್ತು ದ್ವಿಪಕ್ಷೀಯ ವಿಷಯಗಳ ಬಗ್ಗೆ ನಿಯಮಿತವಾಗಿ ಸಮಾಲೋಚನೆಗಳನ್ನು ನಡೆಸಲು ನಾಯಕರು ಒಪ್ಪಿಕೊಂಡರು.