ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಭಾರತದ ಏಕತೆ ಮತ್ತು ಸಾರ್ವಭೌಮತ್ವವನ್ನು ರಕ್ಷಿಸಲು ಸರ್ದಾರ್ ಪಟೇಲ್ ಅವರ ಬದ್ಧತೆಯನ್ನು ಪ್ರಧಾನಿ ಶ್ಲಾಘಿಸಿದರು.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
"ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಅವರಿಗೆ ನನ್ನ ಅನಂತ ನಮನಗಳು. ರಾಷ್ಟ್ರದ ಏಕತೆ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವುದು ಅವರ ಜೀವನದ ಪ್ರಮುಖ ಆದ್ಯತೆಯಾಗಿತ್ತು. ಅವರ ವ್ಯಕ್ತಿತ್ವ ಮತ್ತು ಕಾರ್ಯಗಳು ದೇಶದ ಎಲ್ಲ ಪೀಳಿಗೆಗೂ ಸ್ಫೂರ್ತಿ ನೀಡಲಿವೆ."
भारत रत्न सरदार वल्लभभाई पटेल की जन्म-जयंती पर उन्हें मेरा शत-शत नमन। राष्ट्र की एकता और संप्रभुता की रक्षा उनके जीवन की सर्वोच्च प्राथमिकता थी। उनका व्यक्तित्व और कृतित्व देश की हर पीढ़ी को प्रेरित करता रहेगा।
— Narendra Modi (@narendramodi) October 31, 2024