ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಶೇರ್ ಬಹದ್ದೂರ್ ದೇವುಬಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ನೇಪಾಳದ ಪ್ರಧಾನ ಮಂತ್ರಿಯಾಗಿ ನೇಮಕಗೊಂಡಿದ್ದಕ್ಕಾಗಿ ಹಾಗೂ ಸಂಸತ್ತಿನಲ್ಲಿ ವಿಶ್ವಾಸ ಮತವನ್ನು ಗೆದ್ದಿದ್ದಕ್ಕಾಗಿ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದರು.
ಭಾರತ ಮತ್ತು ನೇಪಾಳ ಜನರ ನಡುವಿನ ವಿಶಿಷ್ಟ ಹಾಗೂ ಸಾವಿರಾರು ವರ್ಷಗಳ ಹಳೆಯ ನಂಟನ್ನು ಆಧರಿಸಿರುವ ಉಭಯ ದೇಶಗಳ ಸ್ನೇಹವನ್ನು ನಾಯಕರು ಸ್ಮರಿಸಿದರು. ಎಲ್ಲಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡಲು ಉಭಯ ನಾಯಕರು ಪರಸ್ಪರ ಸಹಮತ ವ್ಯಕ್ತಪಡಿಸಿದರು.
ಕೋವಿಡ್-19 ಸಾಂಕ್ರಾಮಿಕ ವಿರುದ್ಧ ನಡೆಯುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ಸಹಕಾರ ಮತ್ತು ಸಮನ್ವಯವನ್ನು ಬಲಪಡಿಸುವ ಮಾರ್ಗಗಳ ಬಗ್ಗೆ ಅವರು ವಿಶೇಷವಾಗಿ ಚರ್ಚಿಸಿದರು.