ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾದ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.
ಉಭಯ ನಾಯಕರು, ಉಕ್ರೇನ್‌ನ ಪರಿಸ್ಥಿತಿ ಕುರಿತು ಪರಾಮರ್ಶಿಸಿದರು. ವಿಶೇಷವಾಗಿ ಖಾರ್ಕಿವ್ ನಗರದಲ್ಲಿ ಅನೇಕ ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿರುವ ಬಗ್ಗೆ ಸಮಾಲೋಚಿದರು. ಹಾಗೆಯೇ ಸಂಘರ್ಷದ ಪ್ರದೇಶಗಳಿಂದ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕುರಿತು ಅವರು ಚರ್ಚಿಸಿದರು.