ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 12ರಂದು ನವ ದೆಹಲಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್.ಎಚ್.ಆರ್.ಸಿ.) ಸಂಸ್ಥಾಪನಾ ದಿನದ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಅಂಚೆ ಚೀಟಿ ಮತ್ತು ವಿಶೇಷ ಲಕೋಟೆ ಬಿಡುಗಡೆ ಮಾಡಲಿದ್ದಾರೆ. ಎನ್.ಎಚ್.ಆರ್.ಸಿ. ಅಂತರ್ಜಾಲತಾಣದ ಹೊಸ ಆವೃತ್ತಿಗೂ ಚಾಲನೆ ನೀಡಲಿದ್ದಾರೆ. ಈ ಹೊಸ ವೆಬ್ ಸೈಟ್ ಹೆಚ್ಚು ಬಳಕೆದಾರ ಸ್ನೇಹಿಯಾಗಿದೆ ಮತ್ತು ವಿಶೇಷ ಅಗತ್ಯ ಇರುವ ವ್ಯಕ್ತಿಗಳಿಗೂ ಸುಲಭ ಪ್ರವೇಶಾವಕಾಶಹೊಂದಿದೆ.
ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿ ಭಾಷಣವನ್ನೂ ಮಾಡಲಿದ್ದಾರೆ.