ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವೀಡನ್‌ನ ಪ್ರಧಾನಿ ಶ್ರೀ ಸ್ಟೀಫನ್ ಲೋಫ್ವೆನ್ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದರು.
COVID-19 ಸಾಂಕ್ರಾಮಿಕ ರೋಗ ಮತ್ತು ಅದರ ಆರೋಗ್ಯ ಮತ್ತು ಆರ್ಥಿಕ ಪರಿಣಾಮಗಳನ್ನು ನಿಯಂತ್ರಿಸಲು ಆಯಾ ದೇಶಗಳಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು.
COVID-19 ವಿರುದ್ಧದ ಜಾಗತಿಕ ಪ್ರಯತ್ನಗಳಿಗೆ ಸಹಕಾರಿಯಾಗುವ ಭಾರತೀಯ ಮತ್ತು ಸ್ವೀಡಿಷ್ ಸಂಶೋಧಕರು ಮತ್ತು ವಿಜ್ಞಾನಿಗಳ ನಡುವಿನ ಸಹಯೋಗ ಮತ್ತು ದತ್ತಾಂಶ ಹಂಚಿಕೆಯನ್ನು ಪ್ರಾಮುಖ್ಯತೆಯನ್ನು ಇಬ್ಬರೂ ನಾಯಕರು ಒಪ್ಪಿಕೊಂಡರು,
ಪ್ರಯಾಣದ ನಿರ್ಬಂಧಗಳಿಂದಾಗಿ ಸಿಲುಕಿಕೊಂಡಿರುವ ಪರಸ್ಪರರ ನಾಗರಿಕರಿಗೆ ಅಗತ್ಯವಾದ ಸೌಲಭ್ಯ ಮತ್ತು ಸಹಾಯವನ್ನು ಒದಗಿಸುವುದಾಗಿ ಉಭಯ ನಾಯಕರು ಭರವಸೆ ನೀಡಿದರು.
COVID-19 ರ ವಿರುದ್ಧ ಹೋರಾಡಲು ವೈದ್ಯಕೀಯ ಸಾಮಗ್ರಿಗಳ ಲಭ್ಯತೆಯನ್ನು ಉತ್ತಮಗೊಳಿಸಲು ಎರಡೂ ದೇಶಗಳ ಅಧಿಕಾರಿಗಳು ಸಂಪರ್ಕದಲ್ಲಿರುವ ಬಗ್ಗೆ ಅವರು ಸಮ್ಮತಿಸಿರು.