ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2022 ರ ಜುಲೈ 15 ರಿಂದ ಮುಂದಿನ 75 ದಿನಗಳವರೆಗೆ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತ ಕೋವಿಡ್ -19 ಮುನ್ನೆಚ್ಚರಿಕೆ ಡೋಸ್ ನೀಡುವ ನಿರ್ಧಾರವು ಭಾರತದ ಲಸಿಕಾಕರಣ ವ್ಯಾಪ್ತಿಯನ್ನು ಹೆಚ್ಚಿಸುತ್ತದೆ ಮತ್ತು ಆರೋಗ್ಯಕರ ರಾಷ್ಟ್ರವನ್ನು ಸೃಷ್ಟಿಸುತ್ತದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.
#AzadiKaAmritMahotsav ಆಚರಣೆಯ ಭಾಗವಾಗಿ ಇಂದಿನ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ:
"ಕೋವಿಡ್ -19 ವಿರುದ್ಧ ಹೋರಾಡಲು ಲಸಿಕೆಯು ಪರಿಣಾಮಕಾರಿ ಸಾಧನವಾಗಿದೆ. ಇಂದಿನ ಸಂಪುಟ ಸಭೆ ನಿರ್ಧಾರವು ಭಾರತದ ಲಸಿಕಾಕರಣದ ವ್ಯಾಪ್ತಿಯನ್ನು ಹೆಚ್ಚಿಸುತ್ತದೆ ಮತ್ತು ಆರೋಗ್ಯಕರ ರಾಷ್ಟ್ರವನ್ನು ಸೃಷ್ಟಿಸುತ್ತದೆ,''
Vaccination is an effective means to fight COVID-19. Today’s Cabinet decision will further India’s vaccination coverage and create a healthier nation. https://t.co/LolQyWjK90
— Narendra Modi (@narendramodi) July 13, 2022