ಯುದ್ಧ ಪೀಡಿತ ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂವಾದ ನಡೆಸಿದರು. ವಿದ್ಯಾರ್ಥಿಗಳು ತಮ್ಮ ತೆರವಿನ ಅನುಭವಗಳನ್ನು ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಂಡರು.
ಪ್ರಧಾನಿ ಮೋದಿಯವರ ಕ್ಷೇತ್ರವಾದ ವಾರಣಾಸಿಯಲ್ಲಿ ಈ ಸಂವಾದ ನಡೆದಿದೆ. ಉಕ್ರೇನ್‌ನಿಂದ ನಮ್ಮ ನಾಗರಿಕರನ್ನು ಮರಳಿ ಕರೆತರಲು ನಡೆಯುತ್ತಿರುವ ಆಪರೇಷನ್ ಗಂಗಾ ಕಾರ್ಯಾಚರಣೆಗಾಗಿ ಭಾರತ ಸರ್ಕಾರ, ಭಾರತೀಯ ರಾಯಭಾರ ಕಚೇರಿಗಳು ಮತ್ತು ಪ್ರಧಾನಿ ಮೋದಿಯವರನ್ನು ವಿದ್ಯಾರ್ಥಿಗಳು ಶ್ಲಾಘಿಸಿದರು. ಭಾರತದ ತ್ರಿವರ್ಣ ಧ್ವಜದ ಶಕ್ತಿಯ ಬಗ್ಗೆ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.
ಸಿಕ್ಕಿಬಿದ್ದ ಭಾರತೀಯರನ್ನು ಮರಳಿ ಕರೆತರಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು ಮತ್ತು ಉಳಿದ ವಿದ್ಯಾರ್ಥಿಗಳನ್ನು ಶೀಘ್ರವಾಗಿ ಸ್ಥಳಾಂತರಿಸಲು ಭಾರತ ಸರ್ಕಾರದ ಸಂಪೂರ್ಣ ಬೆಂಬಲದ ಭರವಸೆ ಅವರಿಗೆ ನೀಡಿದರು.