ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ದುಬೈನ ಪ್ರಧಾನಮಂತ್ರಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು 14 ಫೆಬ್ರವರಿ 2024 ರಂದು ದುಬೈನ ಜೆಬೆಲ್ ಅಲಿ ಮುಕ್ತ ವ್ಯಾಪಾರ ವಲಯದಲ್ಲಿ ನಿರ್ಮಿಸಲಾಗುತ್ತಿರುವ ಭಾರತ್ ಮಾರ್ಟ್‌ಗೆ ವರ್ಚ್ಯುಯಲ್ ಆಗಿ ಶಂಕುಸ್ಥಾಪನೆ ನೆರವೇರಿಸಿದರು.
ಈ ಭಾರತ್ ಮಾರ್ಟ್ ಭಾರತ-ಯುಎಇ ದ್ವಿಪಕ್ಷೀಯ ವ್ಯಾಪಾರವನ್ನು ಮತ್ತಷ್ಟು ಉತ್ತೇಜಿಸುತ್ತದೆ ಎಂದು ಉಭಯ ನಾಯಕರು ವಿಶ್ವಾಸ ವ್ಯಕ್ತಪಡಿಸಿದರು.
ಗಲ್ಫ್, ಪಶ್ಚಿಮ ಏಷ್ಯಾ, ಆಫ್ರಿಕಾ ಮತ್ತು ಯುರೇಷಿಯಾದ ಅಂತಾರಾಷ್ಟ್ರೀಯ ಖರೀದಿದಾರರನ್ನು ತಲುಪಲು ಪರಿಣಾಮಕಾರಿ ವೇದಿಕೆಯನ್ನು ಒದಗಿಸುವ ಮೂಲಕ ಭಾರತದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವಲಯಗಳ ರಫ್ತುಗಳನ್ನು ಉತ್ತೇಜಿಸುವಲ್ಲಿ ಭಾರತ್ ಮಾರ್ಟ್ ಪ್ರಮುಖ ಪಾತ್ರ ವಹಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಪ್ರಧಾನಮಂತ್ರಿ ಹೇಳಿದರು.