ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವದೇಶಿ ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡುವಂತಹ ಸ್ಪೂರ್ತಿದಾಯಕ ವಿಡಿಯೋವನ್ನು ಹಂಚಿಕೊಂಡಿರುವ ಮೂಲಕ ದೇಶಾದ್ಯಂತ ವೋಕಲ್ ಫಾರ್ ಲೋಕಲ್ ಅಭಿಯಾನಕ್ಕೆ ಉತ್ತಮ ಸ್ಪಂದನೆ ಜತೆಗೆ ಅನುಕರಣೆಯು ವೇಗವನ್ನೂ ಪಡೆಯುತ್ತಿದೆ ಎಂದು ಹೇಳಿದ್ದಾರೆ. "ನಮೋ ಆಪ್"ನಲ್ಲಿ ಸ್ವದೇಶಿ ಉತ್ಪನ್ನಗಳೊಂದಿಗೆ ಸೆಲ್ಫಿಗಳನ್ನು ಹಂಚಿಕೊಳ್ಳಲು ಮತ್ತು ಯುಪಿಐ ಮೂಲಕ ಪಾವತಿ ಮಾಡುವಂತೆಯೂ ಅವರು ದೇಶದ ಜನರಿಗೆ ಕರೆ ನೀಡಿದ್ದಾರೆ.
ಈ ಬಗ್ಗೆ "ಎಕ್ಸ್" ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ಸಂದೇಶ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿಗಳು,
"ವೋಕಲ್ ಫಾರ್ ಲೋಕಲ್ ಅಭಿಯಾನಕ್ಕೆ ದೇಶಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ,ʼʼ ಎಂದು ಸಂತಸ ವ್ಯಕ್ತಪಡಿಸಿದ್ದಾರೆ
The #VocalForLocal movement is getting great momentum across the country. pic.twitter.com/9lcoGbAvoi
— Narendra Modi (@narendramodi) November 6, 2023