ಮಹಿಳಾ ಹಾಕಿಯಲ್ಲಿ ಸ್ವಲ್ಪದರಲ್ಲೇ ಪದಕ ನಮ್ಮ ಕೈತಪ್ಪಿದೆ, ಆದರೆ ಈ ತಂಡವು ನವ ಭಾರತದ ಸ್ಫೂರ್ತಿಯನ್ನು ಪ್ರತಿಬಿಂಬಿಸುತ್ತದೆ - ಇಲ್ಲಿ ನಾವು ನಮ್ಮ ಗರಿಷ್ಠ ಶಕ್ತಿ-ಸಾಮರ್ಥ್ಯಗಳೊಂದಿಗೆ ಪ್ರಯತ್ನಿಸುತ್ತೇವೆ ಮತ್ತು ಹೊಸ ಎತ್ತರಗಳನ್ನು ತಲುಪುತ್ತೇವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಟೋಕಿಯೊ ʻಒಲಿಂಪಿಕ್ಸ್ 2020ʼನಲ್ಲಿ ನಮ್ಮ ಮಹಿಳಾ ಹಾಕಿ ತಂಡದ ಶ್ರೇಷ್ಠ ಪ್ರದರ್ಶನ ನಮ್ಮ ನೆನಪಿನಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ, "ಟೋಕಿಯೊ ಒಲಿಂಪಿಕ್ಸ್‌ನಲ್ಲಿ#Tokyo2020 ನಮ್ಮ ಮಹಿಳಾ ಹಾಕಿ ತಂಡದ ಶ್ರೇಷ್ಠ ಪ್ರದರ್ಶನ ನಮ್ಮ ನೆನಪಿನಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ. ಅವರು ಕ್ರೀಡಾಕೂಟದುದ್ದಕ್ಕೂ ತಮ್ಮ ಅತ್ಯುತ್ತಮವಾದುದನ್ನು ನೀಡಿದರು. ತಂಡದ ಪ್ರತಿಯೊಬ್ಬ ಸದಸ್ಯರೂ ಗಮನಾರ್ಹ ದಿಟ್ಟತನ, ಕೌಶಲ್ಯ ಮತ್ತು ಚೈತನ್ಯವನ್ನು ವರದಾನವಾಗಿ ಪಡೆದಿದ್ದಾರೆ. ಈ ಶ್ರೇಷ್ಠ ತಂಡದ ಬಗ್ಗೆ ಇಡೀ ಭಾರತವೇ ಹೆಮ್ಮೆ ಪಡುತ್ತದೆ.
ಮಹಿಳಾ ಹಾಕಿಯಲ್ಲಿ ಸ್ವಲ್ಪದರಲ್ಲೇ ಪದಕ ನಮ್ಮ ಕೈತಪ್ಪಿದೆ. ಆದರೆ ಈ ತಂಡವು ನವ ಭಾರತದ ಸ್ಫೂರ್ತಿಯನ್ನು ಪ್ರತಿಬಿಂಬಿಸುತ್ತದೆ- ಇಲ್ಲಿ ನಾವು ನಮ್ಮ ಗರಿಷ್ಠ ಶಕ್ತಿ-ಸಾಮರ್ಥ್ಯಗಳೊಂದಿಗೆ ಪ್ರಯತ್ನಿಸುತ್ತೇವೆ ಮತ್ತು ಹೊಸ ಎತ್ತರಗಳನ್ನು ತಲುಪುತ್ತೇವೆ. ಎಲ್ಲಕ್ಕಿಂತ ಮುಖ್ಯವಾಗಿ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ #Tokyo2020 ಮಹಿಳಾ ಹಾಕಿ ತಂಡದ ಯಶಸ್ಸು ಭಾರತದ ಯುವ ಹೆಣ್ಣುಮಕ್ಕಳನ್ನು ಹಾಕಿಯತ್ತ ಸೆಳೆಯುತ್ತದೆ ಮತ್ತು ಅದರಲ್ಲಿ ಉತ್ತಮ ಸಾಧನೆ ಮಾಡಲು ಪ್ರೇರೇಪಿಸುತ್ತದೆ. ಈ ತಂಡದ ಬಗ್ಗೆ ಹೆಮ್ಮೆ ಪಡುತ್ತೇನೆ." ಎಂದು ಹೇಳಿದ್ದಾರೆ.
We will always remember the great performance of our Women’s Hockey Team at #Tokyo2020. They gave their best throughout. Each and every member of the team is blessed with remarkable courage, skill and resilience. India is proud of this outstanding team.
— Narendra Modi (@narendramodi) August 6, 2021
We narrowly missed a medal in Women’s Hockey but this team reflects the spirit of New India- where we give our best and scale new frontiers. More importantly, their success at #Tokyo2020 will motivate young daughters of India to take up Hockey and excel in it. Proud of this team.
— Narendra Modi (@narendramodi) August 6, 2021